ನಟ ದುನಿಯಾ ವಿಜಯ್ ತಾಯಿ ವಿಧಿವಶ

posted in: ರಾಜ್ಯ | 0

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಇಂದು ವಿಧಿವಶರಾಗಿದ್ದಾರೆ.

ಈ ಕುರಿತು ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದ್ದ ಕಾರಣದಿಂದ ಮನೆಯಲ್ಲಿಯೇ ಚಿಕಿತ್ಸೆಗಾಗಿ ದುನಿಯಾ ವಿಜಯ್ ವ್ಯವಸ್ಥೆ ಮಾಡಿದ್ದರು. ಕಳೆದ 23 ದಿನದಿಂದ ವೈದ್ಯರು ಮನೆಗೆ ಆಗಮಿಸಿ ಚಿಕಿತ್ಸೆ ನೀಡುತ್ತಿದ್ದರು. ಕೆಲ ದಿನಗಳ ಹಿಂದೆಯೇ ನಾರಾಯಣಮ್ಮ ಚೇತರಿಕೆ ಕಂಡಿದ್ದು, ಮತ್ತೆ ಆರೋಗ್ಯ ಹದಗೆಟ್ಟಿತ್ತು.

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಾರಾಯಣಮ್ಮ ನಿಧನರಾಗಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

ನಿಮ್ಮ ಕಾಮೆಂಟ್ ಬರೆಯಿರಿ

advertisement