ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್ : ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆಪ್ತರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.

2021ರ ಜೂನ್ 6 ರಂದು ಟಿ.ಜೆ.ಅಬ್ರಹಾಂ ಭ್ರಷ್ಟಾಚಾರ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ಆಪ್ತರಾದ ಶಶಿಧರ ಮರಡಿ, ವಿರೂಪಾಕ್ಷಪ್ಪ ಯಮಕನಮರಡಿ, ಸಂಜಯಶ್ರೀ, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ ಪ್ರಕಾಶ್, ಕ್ರೆಸೆಂಟ್ ಹೋಟೆಲ್ ಮಾಲೀಕರಾದ ಕೆ.ರವಿ ವಿರುದ್ಧ ತನಿಖೆ ಮಾಡುವಂತೆ ಕೋರಿ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ವೇಳೆ ತಾವೇ ಖುದ್ದು ವಾದ ಮಂಡಿಸಿದ್ದ ಅಬ್ರಹಾಂ, ಭ್ರಷ್ಟಾಚಾರ ಆರೋಪಕ್ಕೆ ಪೂರಕವಾಗಿ ಕೆಲ ಬ್ಯಾಂಕ್ ದಾಖಲೆಗಳು ಹಾಗೂ ವಾಟ್ಸಪ್ ಚಾಟ್ ಗಳನ್ನು ಒಳಗೊಂಡ ದಾಖಲೆಗಳನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಆರೋಪಿತರ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ದೂರು ಸಲ್ಲಿಸಿದ್ದರಿಂದ ಎಸಿಬಿ ಅರ್ಜಿದಾರರ ಮನವಿ ತಿರಸ್ಕರಿಸಿದೆ. ಹೀಗಾಗಿ ಅರ್ಜಿದಾರರು ಮಾಡಿರುವ ಮನವಿಯಂತೆ ತನಿಖೆಗೆ ನಿರ್ದೇಶಿಸಲಾಗದು ಎಂದು ತಿಳಿಸಿದ ಕೋರ್ಟ್‌ ಅರ್ಜಿ ವಜಾಗೊಳಿಸಿದೆ.

ಪ್ರಮುಖ ಸುದ್ದಿ :-   ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ಯಡಿಯೂರಪ್ಪ ಅವರು ತಮ್ಮ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಸ್ಥಗಿತಗೊಂಡಿದ್ದ ವಸತಿ ಯೋಜನೆಯನ್ನು ಪುನರಾರಂಭಿಸಲು ಲಿಮಿಟೆಡ್. M / s ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಪ್ರೈ.ಲಿ.ನ ಪ್ರತಿನಿಧಿಯಿಂದ ಲಂಚ ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

 

ಪ್ರಕರಣದ ವಿವರ:

ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಇತರೆ ಆಪ್ತರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಿಎಂ ಕುಟುಂಬದವರು ನಕಲಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಹೀಗಾಗಿ ಇವರ ವಿರುದ್ಧ ತನಿಖೆ ನಡೆಸುವಂತೆ 2020ರ ನವೆಂಬರ್ 19 ರಂದು ಎಸಿಬಿಗೆ ಟಿ.ಜೆ. ಅಬ್ರಹಾಂ ದೂರು ಸಲ್ಲಿಸಿದ್ದರು.

ಎಸಿಬಿ ಅಧಿಕಾರಿಗಳು ದೂರಿನ ತನಿಖೆ ಮಾಡದೆ, ಸೂಕ್ತ ವಿವರಣೆಯನ್ನೂ ನೀಡದೆ 2020ರ ಡಿಸೆಂಬರ್ 15 ರಂದು ದೂರನ್ನು ಕೈಬಿಟ್ಟಿದ್ದಾರೆ. ಹೀಗಾಗಿ ಆರೋಪಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಕ್ತ ತನಿಖಾ ಸಂಸ್ಥೆಗೆ ನಿರ್ದೇಸಿಸಬೇಕು ಎಂದು ಟಿ.ಜೆ. ಅಬ್ರಹಾಂ ಕೋರಿದ್ದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement