ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ನಿಧನ

ಶಿಮ್ಲಾ: ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ (87) ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ, ವೀರಭದ್ರಸಿಂಗ್ ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ವೀರಭದ್ರ ಸಿಂಗ್ ಅವರಿಗೆ ಏಪ್ರಿಲ್ 13ರಂದು ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಕೆಲವೇದಿನಗಳ ಬಳಿಕ ಮತ್ತೆ ಆರೋಗ್ಯ ಸ್ಥಿತಿ ತುಂಬಾ ಹದಗೆಟ್ಟಿತ್ತು, ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೀರಭದ್ರಸಿಂಗ್ ಅವರಿಗೆ ಜೂನ್ 11ರಂದು ಕೊರೊನಾ ಸೋಂಕು ಎರಡನೇ ಬಾರಿಗೆ ತಗುಲಿತ್ತು. ಸೋಮವಾರ ಅವರಿಗೆ ಹೃದಯಾಘಾತವಾಗಿತ್ತು, ಐಸಿಯುನಲ್ಲಿ ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹಿಮಾಚಲಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿ ವೀರಭದ್ರ ಸಿಂಗ್ ಕಾರ್ಯನಿರವಹಿಸಿದ್ದರು. ಅವರು 9 ಬಾರಿ ಶಾಸಕ ಹಾಗೂ ಐದು ಬಾರಿ ಸಂಸದರಾಗಿದ್ದರು. ಅವರ ಪತ್ನಿ ಪ್ರತಿಭಾ ಸಿಂಗ್ ಮಾಜಿ ಸಂಸದರಾಗಿದ್ದಾರೆ, ಪುತ್ರ ವಿಕ್ರಮಾದಿತ್ಯ ಶಿಮ್ಲಾ ಗ್ರಾಮೀಣ ಶಾಸಕರಾಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement