ಎನ್‌ಕೌಂಟರಿನಲ್ಲಿ ಇಬ್ಬರು ಪಾಕ್‌ ಉಗ್ರರು ಹತ, ಭಾರತದ ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ,” ಎಂದು ಜಮ್ಮು ಮತ್ತು ಕಾಶ್ಮೀರದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಇದೇ ಸಮಯದಲ್ಲಿ’ ‘ಇಬ್ಬರು ಭಾರತೀಯ ಸೈನಿಕರು ಕೂಡಾ ಹುತಾತ್ಮರಾಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಕೆಲವು ದಿನಗಳಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಎರಡನೇ ಮುಖಾಮುಖಿಯಾಗಿದೆ. ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮವನ್ನು ಆಗಾಗೇ ಉಲ್ಲಂಘನೆ ಮಾಡಲಾಗುತ್ತಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯ್ಬಾ ಜಮ್ಮು ಪ್ರದೇಶದ ಭಾರತೀಯ ವಾಯುಪಡೆಯ ನೆಲೆಯ ಮೇಲೆ ಡ್ರೋನ್ ದಾಳಿ ನಡೆಸಿದ ನಂತರ ಭಾರತೀಯ ಸೈನಿಕರು ಎನ್‌ಕೌಂಟರ್‌ಗಳು ಮತ್ತು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ರಕ್ಷಣಾ ವಕ್ತಾರರು, “ರಾಜೌರಿ ಜಿಲ್ಲೆಯ ದಾದಲ್, ಸುಂದರಬಾನಿ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ಮತ್ತು ಭಯೋತ್ಪಾದಕರ ಕೃತ್ಯಗಳ ಬಗ್ಗೆ ಮಾಹಿತಿ ಲಭಿಸಿದ ಆಧಾರದ ಮೇಲೆ, ಸೈನ್ಯವು ಜೂನ್ 29 ರಂದು ವ್ಯಾಪಕ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಾರ್ಯಾಚರಣೆ ವಿಸ್ತರಿಸಿ ಜುಲೈ 8 ರಂದು ದಾದಲ್ ಕಾಡಿನಲ್ಲಿ ಉಗ್ರರ ಜೊತೆ ಎನ್‌ಕೌಂಟರ್‌ ನಡೆದಿದೆ ಎಂದು ಹೇಳಿದರು.
ಉಗ್ರರು ಗುಂಡು ಹಾರಿಸಿದ್ದು, ಗ್ರೆನೇಡ್‌ಗಳನ್ನು ಎಸೆಯಲು ಆರಂಭಿಸಿದರು. ಎನ್‌ಕೌಂಟರ್‌ನಲ್ಲಿ ಇಬ್ಬರು ವಿದೇಶಿ ಭಯೋತ್ಪಾದಕರು ಮೃತಪಟ್ಟಿದ್ದಾರೆ. ಹಾಗೆಯೇ ಕಾರ್ಯಾಚರಣೆಯಲ್ಲಿ ಇಬ್ಬರು ಭಾರತೀಯ ಯೋಧರು ಕೂಡಾ ಮೃತಪಟ್ಟಿದ್ದಾರೆ. ಇನ್ನಿಬ್ಬರು ಯೋಧರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ,” ಎಂದು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement