ಸಿಇಟಿ ಪರೀಕ್ಷೆ- 2021: ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

posted in: ರಾಜ್ಯ | 0

ಬೆಂಗಳೂರು: ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2021 ಪರೀಕ್ಷೆ ಬರೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರ ವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅರ್ಜಿ ಸಲ್ಲಿಕೆಯ ಜೊತೆಗೆ ಶುಲ್ಕ ಪಾವತಿಯನ್ನು ಜು. 19ರ ವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜುಲೈ 14ರಿಂದ 20ರ ವರೆಗೆ ಅವಕಾಶ ನೀಡಲಾಗಿದೆ.
ಎನ್‌ಸಿಸಿ, ಕ್ರೀಡೆ, ರಕ್ಷಣೆ, ರಕ್ಷಣೆ (ನಿವೃತ್ತ), ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ವರ್ಗಗಳನ್ನು ಕ್ಲೇಮ್‌ ಮಾಡುವ ಅಭ್ಯರ್ಥಿಗಳು ನಿಗದಿಪಡಿಸಿರುವ ತಮಗೆ ಹತ್ತಿರವಾದ ಯಾವುದಾದರೂ ಕೇಂದ್ರಕ್ಕೆ ತೆರಳಿ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ http://kea.kar.nic.in ವೆಬ್‌ತಾಣಕ್ಕೆ ಭೇಟಿ ವಿವರ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ