ಕರ್ನಾಟಕದಲ್ಲಿ ಕೋವಿಡ್ -19 ಮೂರನೇ ಅಲೆಗೆ ಸಿದ್ಧತೆ

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ತಡೆಗೆ ಕೆಂಪು, ಹಸಿರು, ಹಳದಿ ವಲಯಗಳಾಗಿ ಗುರುತಿಸಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಈ ನಡುವೆ ನೆರೆಯ ಕೇರಳದಲ್ಲಿ ದಿನನಿತ್ಯ ಕೊರೊನಾ ಸೋಂಕು ಸಂಖ್ಯೆ ನಿತ್ಯ ಹೆಚ್ಚಳವಾಗುತ್ತಿರುವುದು, ಮೂರನೇ ಅಲೆ ಮುನ್ಸೂಚನೆಯ ಭೀತಿ ಹೆಚ್ಚಳವಾಗಿದೆ. ಹೀಗಾಗಿ ರಾಜ್ಯಕ್ಕೆ ಆತಂಕ ಶುರುವಾಗಿದ್ದು ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಸರ್ಕಾರ ಮುಂದಾಗಿದೆ.
ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಜನರು ಕಡ್ಡಾಯವಾಗಿ ನೆಗೆಟಿವ್ ವರದಿ ತೋರಿಸುವಂತೆ ಸೂಚಿಸಲಾಗಿದೆ. ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಬಗ್ಗೆ ಜನರು ಜಾಗ್ರತೆಯಿಂದ ಇರಬೇಕು ಎಂದು ತಜ್ಞರು ಮುನ್ನೆಚ್ಚರಿಕೆ ನೀಡಿರುವ ನಡುವೆಯೇ ಕೇರಳದಲ್ಲಿ ದಿನನಿತ್ಯ ೧೨ ರಿಂದ ೧೫ ಸಾವಿರ ಸರಾಸರಿಯಲ್ಲಿ ಸೋಂಕು ದಾಖಲಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.
ಮೂರನೇ ಅಲೆಯ ಸೋಂಕು ದೇಶದಲ್ಲಿ ಅಕ್ಟೋಬರ್, ನವಂಬರ್‌ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದರು.
ಕೇರಳದಲ್ಲಿ ಕಳೆದ ಹತ್ತು ದಿನಗಳ ಅವಧಿಯಲ್ಲಿ ಪ್ರತಿದಿನ ಸರಾಸರಿ ೧೨ ಸಾವಿರಕ್ಕೂ ಹೆಚ್ಚಿನ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಮೂರನೆಯ ಅಲೆಯ ಸಂಕೇತವೇ ಎಂದು ಚರ್ಚೆಗಳು ನಡೆಯುತ್ತಿವೆ.
ಮೂರನೇ ಅಲೆಯ ಸೋಂಕು ೧೮ ವರ್ಷ ಒಳಗಿನ ವಯೋಮಾನದ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಿದೆ ಎನ್ನುವ ಹಿನ್ನೆಲೆಯಲ್ಲಿ ಮಕ್ಕಳ ಆಸ್ಪತ್ರೆಗಳಲ್ಲಿ ಹಾಸಿಗೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಕ್ಕಳ ಜೊತೆಗೆ ಅವರ ಪೋಷಕರು ಆಸ್ಪತ್ರೆಯಲ್ಲಿ ಇರುವ ವ್ಯವಸ್ಥೆಯನ್ನು ಮಾಡಲು ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ.
ಪ್ಯಾಕೇಜ್ ಪ್ರಕಟ..
ಭವಿಷ್ಯದಲ್ಲಿ ಎದುರಾಗುವ ಕೊರೊನಾ ಸೋಂಕಿನ ಅಲೆಯನ್ನು ತಡೆಯುವ ಸಲುವಾಗಿ ಅಗತ್ಯ ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರಗುರುವಾರ ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸಿದೆ.
ರಾಜ್ಯ ಸರ್ಕಾರಗಳು ಆಮ್ಲಜನಕ ಪೂರೈಕೆ ಆರ್ಥಿಕ ನಿರ್ಮಾಣ ವೆಂಟಿಲೇಟರ್‌ಗಳು ಸೇರಿದಂತೆ ಅಗತ್ಯ ವೈದ್ಯಕೀಯ ಮೂಲ ಸೌಲಭ್ಯವನ್ನು ಮುಂಚಿತವಾಗಿಯೇ ದಾಸ್ತಾನು ಇಟ್ಟುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸುವಂತೆಯೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರು : ಮೋದಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement