ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಶುಕ್ರವಾರ 2,290 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,67,158ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 68 ಜನರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 35,731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಇದೇ ಸಮಯದಲ್ಲಿ 3,045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,93,498ಕ್ಕೆ ಏರಿಕೆಯಾಗಿದೆ. ಇನ್ನು 37,906 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 472 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,18,493ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಸೋಂಕಿಗೆ 12 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.48ಕ್ಕೆ ಇಳಿದಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್ನಲ್ಲಿ ಕೆಳಗೆ ಕೊಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ