ಜುಲೈ 14ರ ವರೆಗೆ ಭಾರೀ ಮಳೆ: 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಜುಲೈ 14ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ಅತಿ ಹೆಚ್ಚು ಮಳೆ ಬೀಳಲಿರುವ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದ ಮೂರು ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದ್ದು, ಶನಿವಾರದಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವರುವ ಕಾರಣ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಜು.೧೫ರ ವರೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement