ಕರ್ನಾಟಕದಲ್ಲಿ ಶನಿವಾರ ಮತ್ತಷ್ಟು ಇಳಿಕೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ.
ರಾಜ್ಯದಲ್ಲಿ ಶನಿವಾರ ಹೊಸದಾಗಿ 2,162 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು 48 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 2,879 ಜನರು ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ಬಾಗಲಕೋಟೆ, ವಿಜಯಪುರ, ರಾಯಚೂರು ಬೀದರ್, ಗದಗ ,ಹಾವೇರಿ, ಕಲಬುರಗಿ, ಯಾದಗಿರಿ, ಜಿಲ್ಲೆಗಳಲ್ಲಿ 10ಕ್ಕಿಂತಲೂ ಕಡಿಮೆ ಹೊಸ ಸೋಂಕು ದಾಖಲಾಗಿದೆ. ಕೊರೊನಾ ಸೋಂಕಿನ ಪಾಸಿಟಿವಿ ಪ್ರಮಾಣ ಶೇ.1.48 ಕ್ಕೆ ಕುಸಿದಿದ್ದು ರಾಜ್ಯದಲ್ಲಿ ಸೋಂಕಿನ ಮರಣ ಪ್ರಮಾಣ ಶೇ.2.22 ಕ್ಕೆ ಕುಸಿದಿದೆ.ಸದ್ಯ ರಾಜ್ಯದಲ್ಲಿ 37,141 ಕ್ಕೆ ಸಕ್ರಿಯ ಪ್ರಕರಣಗಳುಇಳಿಕೆ ಕಂಡಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,69,320 ಮಂದಿಗೆ ಏರಿಕೆಯಾಗಿದೆ.ಇಲ್ಲಿಯ ತನಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,96,377 ಕ್ಕೆ ಹೆಚ್ಚಳವಾಗಿದೆ 35,779 ಮಂದಿ ಒಟ್ಟಾರೆಯಾಗಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ
ಬೆಂಗಳೂರಿನಲ್ಲಿ ಇಳಿಕೆ..
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಹೊಸ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ. ಶನಿವಾರ 452 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು 5 ಜನರು ಮೃತಪಟ್ಟಿದ್ದಾರೆ. 746 ಮಂದಿ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,45,666 ಮಂದಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ.  ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement