ರಾಜಭವನಕ್ಕೆ ಆಗಮಿಸಿದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂ: ನಾಳೆ (ಭಾನುವಾರ) ಕರ್ನಾಟಕ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿರುವ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು (ಶನಿವಾರ) ಬೆಂಗಳೂರಿಗೆ ಆಗಮಿಸಿದರು.
ಗೆಹ್ಲೋಟ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್. ಅಶೋಕ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೆಹ್ಲೋಟ್ ಅವರನ್ನು ಕಂದಾಯ ಸಚಿವರೊಂದಿಗೆ ರಾಜ್ಯ ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ರಾಜ್ಯ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸ್ವಾಗತಿಸಿದರು. ಬಳಿಕ ಥಾವರ್ ಚಂದ್ ಗೆಹ್ಲೋಟ್ ವಿಮಾನ ನಿಲ್ದಾಣದಿಂದ ನೇರವಾಗಿ ರಾಜಭವನಕ್ಕೆ ತೆರಳಿದರು. ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉನ್ನತ ಅಧಿಕಾರಗಳು ಹೂ ಗುಚ್ಛ ನೀಡಿ ಬರಮಾಡಿಕೊಂಡರು.
ಥಾವರ್ ಚಂದ್ ಗೆಹ್ಲೋಟ್ ರಾಜ್ಯದ 19ನೇ ರಾಜ್ಯಪಾಲರಾಗಿ ನಾಳೆ (ಜು.11) ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.
ರಾಜ್ಯಪಾಲ ವಜುಭಾಯಿ ವಾಲಾ ಸುಮಾರು 6 ವರ್ಷ 10 ತಿಂಗಳು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ: ಸ್ಕೂಟಿಯಲ್ಲಿ ಹೋಗುವಾಗ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement