ಸುಮಲತಾ ಭೇಟಿ ನೀಡಿದ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ 

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿದ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ ಮಾಡಿ ಗಣಿಗಳನ್ನು ಬಂದ್ ಮಾಡಿಸಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ.
ಶ್ರೀರಂಗಪಟ್ಟಣದ ಚೆನ್ನನಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ ಹಾಗೂ ಶ್ರೀರಂಗಪಟ್ಟಣ ಕ್ವಾರೆಗಳ ಮೇಲೆ ತಹಶೀಲ್ದಾರ್ ರೂಪಾ ಅವರು ದಾಳಿ ಮಾಡಿದ್ದು ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದಾರೆ.
ಚೆನ್ನನಕೆರೆ ಸಮೀಪದಲ್ಲಿ ಅಕ್ರಮವಾಗಿ ಕಲ್ಲು ಕ್ವಾರೆ ನಡೆಯುತ್ತಿದ್ದು, ಅಕ್ರಮ ಕ್ವಾರೆ ಪ್ರದೇಶಗಳಿಗೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪಾ ಪೊಲೀಸರ ಜೊತೆ ತೆರಳಿ ದಾಳಿ ನಡೆಸಿದ್ದಾರೆ ಮತ್ತು ಅಕ್ರಮ ಕ್ವಾರಿಗಳನ್ನು ಬಂದ್‌ ಮಾಡಿಸಿದ್ದಾರೆ.
ಇತ್ತೀಚೆಗಷ್ಟೇ ಈ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದ ಸಂಸದೆ ಸುಮಲತಾ ಅವರು ಅಕ್ರಮ ಕಲ್ಲು ಕ್ವಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿಗಳು ಅಕ್ರಮ ಕಲ್ಲು ಕ್ವಾರಿಗಳ ಮೇಲೆ ದಾಳಿ ಮಾಡಿದ್ದಾರೆ. ಕಠಿಣ ಕ್ರಮಕ್ಕೆ ಮುಂದಾಗಿದ್ದು, ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಸಂಸದೆ ಸುಮಲತಾ ಅವರಿಗೆ ಅಡ್ಡಿಪಡಿಸಿದ್ದರು. ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಆಘಾತ ವ್ಯಕ್ತಪಡಿಸಿದ್ದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement