ಅಕ್ರಮ ಗಣಿಗಾರಿಕೆ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ: ಸುಮಲತಾ

ಬೆಂಗಳೂರು: ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ. ಆದರೆ, ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಂಸದೆ ಸುಮಲತಾ ಘೋಷಣೆ ಮಾಡಿದ್ದಾರೆ.
ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮದ ನಂತರ ರಾಜಭವನದಲ್ಲಿ ಭಾನುವಾರ ಮಾತನಾಡಿದ ಅವರು, ನಾವು ಅಡ್ಡದಾರಿಯಲ್ಲಿ ಹೋಗುವುದು ಬೇಡ. ನಮ್ಮ ನೋವನ್ನು ಶಾಂತಿಯುತವಾಗಿ ಪ್ರಕಟ ಮಾಡೋಣ. ನಾನು ಯಾರ ವಿರುದ್ಧ ಹೋರಾಟ ಮಾಡಿಲ್ಲ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ ವಿರುದ್ಧ ಅಷ್ಟೆ. ನಾನು ಯಾರನ್ನೂ ಟಾರ್ಗೆಟ್ ಮಾಡಿ ರಾಜಕೀಯ ಮಾಡಿಲ್ಲ. ಮಾಡುವುದಿಲ್ಲ. ಈಗಾಗಲೇ ಸಂಸತ್ತಿನಲ್ಲಿ 2 ಬಾರಿ ಗಣಿಗಾರಿಕೆ ವಿಚಾರ ಪ್ರಸ್ತಾಪಿಸಿದ್ದೇನೆ. ಇನ್ನು ಮುಂದೆ ಮತ್ತಷ್ಟು ಹೆಚ್ಚಾಗಿ ವಿಚಾರ ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಅವರ ವಾಕ್ಸಮರ ವಿರಾಮದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಗಮನ ಅಕ್ರಮ ಗಣಿಗಾರಿಕೆ ನಿಲ್ಲಿಸುವುದು. ನಾನು ಯಾರನ್ನೂ ಟಾರ್ಗೆಟ್‌ ಮಾಡಿಲ್ಲ. ನಾನು ದ್ವೇಷ ರಾಜಕಾರಣ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಮೂರ್ನಾಲ್ಕು ದಿನಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ನಿರಾಣಿ ಭೇಟಿಗೆ ಅವಕಾಶ ನೀಡಲಿದ್ದಾರೆ. ದಾಖಲೆ ಕೊಡಬೇಕಾಗಿರುವುದು ನಾನಲ್ಲ, ಅಧಿಕಾರಿಗಳು. ಕಠಿಣ ಕ್ರಮಕೈಗೊಳ್ಳಲು ನಾನು ಮನವಿ ಮಾಡುತ್ತೇನೆ ಅಷ್ಟೆ ಎಂದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement