ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ

ಬೆಂಗಳೂರು: ತಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು
ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಆರ್. ಅಶೋಕ್, ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿದ್ದ ಗೆಹ್ಲೋಟ್ ಈ ಹಿಂದೆ ರಾಜ್ಯದ ಬಿಜೆಪಿ ಉಸ್ತುವಾರಿಯಾಗಿ ಸಹ ಕಾರ್ಯನಿರ್ವಹಿಸಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement