ಪದ್ಮ ಪ್ರಶಸ್ತಿಗಳಿಗೆ ಉತ್ತಮ ವ್ಯಕ್ತಿಗಳ ನಾಮನಿರ್ದೇಶನ ಮಾಡಲು ಜನರಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ದೇಶದ ಪ್ರತಿಷ್ಠಿತ ಪದ್ಮ ಸರಣಿಯ ಪ್ರಶಸ್ತಿಗಳಿಗೆ ಇದೇ ಮೊದಲ ಬಾರಿಗೆ ಜನಾಭಿಪ್ರಾಯ ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಬೆಳಿಗ್ಗೆ ಟ್ವೀಟ್ ಮಾಡಿದ್ದು, ಭಾರತದಲ್ಲಿ ಬಹಳಷ್ಟು ಮಂದಿ ಪ್ರತಿಭಾನ್ವಿತರಿದ್ದಾರೆ. ಕೆಳ ಹಂತದಲ್ಲಿ ಅವರು ಅತ್ಯುತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಅವರ ಸೇವೆ ಬಹುಶಃ ನಮಗೆ ಗೊತ್ತಿರುವುದಿಲ್ಲ ಅಥವಾ ಕೇಳಿರುವುದಿಲ್ಲ. ಅಂತಹ ಸ್ಫೂರ್ತಿದಾಯಕ ವ್ಯಕ್ತಿಗಳ ಬಗ್ಗೆ ನಿಮಗೆ ಮಾಹಿತಿ ಇದ್ದರೆ ಅವರನ್ನು ಪದ್ಮ ಸರಣಿಯ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಿ ಎಂದು ಕರೆ ನೀಡಿದ್ದಾರೆ.
ಹ್ಯಾಶ್‍ಟ್ಯಾಗ್ ಪೀಪಲ್ಸ್ ಪದ್ಮ (#peoplespadma)ಮೂಲಕ ನಾಗರಿಕರು ಪದ್ಮ ಸರಣಿಯ ಪ್ರಶಸ್ತಿಗಳಿಗೆ ಸಾಧಕರನ್ನು ಗುರುತಿಸಬಹುದಾಗಿದೆ. ಸೆ.15ರ ಒಳಗೆ ಸಾರ್ವಜನಿಕರ ಅಭಿಪ್ರಾಯಗಳನ್ನು padmaawards.gov.in ವೆಬ್‍ಸೈಟ್‍ಗೆ ಸಲ್ಲಿಸಬಹುದಾಗಿದೆ ಎಂದು ಮೋದಿ ಅವರು ತಿಳಿಸಿದ್ದಾರೆ.
ಪ್ರತಿ ವರ್ಷ ಗಣರಾಜ್ಯೋತ್ಸವದ ವೇಳೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗುತ್ತಿದೆ. 1954ರಿಂದಲೂ ಗಣ್ಯರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಸರ್ಕಾರ ನೇಮಿಸಿದ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುತ್ತಿತ್ತು. ಈ ಬಾರಿ ಕೇಂದ್ರ ಸರ್ಕಾರ ಹೊಸ ಪರಿಪಾಠ ಆರಂಭಿಸಿದ್ದು, ಬೇರು ಮಟ್ಟದಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಲು ಜನಾಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement