ಪಶ್ಚಿಮ ಘಟ್ಟದ ರಮಣೀಯ ದೃಶ್ಯ ವೀಕ್ಷಣೆಗೆ ಬೆಂಗಳೂರು – ಮಂಗಳೂರು ನಡುವೆ ಗಾಜಿನ ಹೊದಿಕೆಯ ವಿಸ್ಟಾಡೋಮ್ ರೈಲು ಆರಂಭ

ಮಂಗಳೂರು: ರೈಲ್ವೇ ಇಲಾಖೆಯ ವಿನೂತನ ವಿಸ್ಡಾಡೋಮ್ ಕೋಚ್ ಗೆ ಕರ್ನಾಟಕದಲ್ಲಿ ಇಂದು (ಭಾನುವಾರ) ಚಾಲನೆ ನೀಡಲಾಗಿದೆ.
ರಾಜ್ಯದ ಪ್ರವಾಸೋದ್ಯಮಕ್ಕೆ ಇನ್ನಷ್ಟು ವೇಗಕೊಡುವ ನಿಟ್ಟಿನಲ್ಲಿ ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ವಿಸ್ಡಾಡೋಮ್ ಕೋಚ್ ಸಂಚಾರ ಮಾಡಲಿದೆ.
ಪಶ್ಚಿಮ ಘಟ್ಟದ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗಿದೆ. ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಸ್ಡಾಡೋನ್ ಕೋಚ್ ಗೆ ಚಾಲನೆ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಸ್ಟಾಡೋಮ್ ಬೋಗಿಗಳನ್ನು ಒಳಗೊಂಡಂತಹ ಈ ರೈಲು ದಕ್ಷಿಣ ಭಾರತದಲ್ಲಿ ರೈಲ್ವೆ ಇಲಾಖೆಯಿಂದ ಮೊದಲ ಬಾರಿಗೆ ಪರಿಚಯಿಸಲಾಗಿದೆ. ಮಂಗಳೂರು ಜಂಕ್ಷನ್ ನಲ್ಲಿ ರೈಲು ಸಂಖ್ಯೆ 06540/06539 ಮಂಗಳೂರು ಜೆಎನ್ – ಯಶವಂತಪುರ ಎಕ್ಸ್ ಪ್ರೆಸ್ ರೈಲಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಸಿರು ನಿಶಾನೆ ತೋರಿದ್ದಾರೆ. ಮಂಗಳೂರು ಜಂಕ್ಷನ್ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಚಲಿಸುವ ಈ ಎಕ್ಸ್‌ಪ್ರೆಸ್ ರೈಲಿಗೆ ಅಳವಡಿಸಲಾದ ವಿಸ್ಟಾಡೋಮ್ ಬೋಗಿಗಳು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಎತ್ತರದ ಪರ್ವತಗಳ ಅದ್ಭುತ ನೋಟ, ಕಣಿವೆಗಳು, ಆಳವಾದ ಕಮರಿಗಳು ಮತ್ತು ಹಚ್ಚ ಹಸಿರಿನ ಈ ಪ್ರದೇಶವು ಮಾನ್ಸೂನ್‌ನಲ್ಲಿ ಇನ್ನಷ್ಟು ಸುಂದರ ದೃಶ್ಯಾವಳಿಗಳನ್ನು ನೋಡಬಹುದು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ವಿಸ್ಟಾಡೋಮ್ ರೈಲಿನ ವಿಶೇಷತೆ..:
ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಹೊಂದಿದೆ, ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್‌ಎಚ್‌ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್‌ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಛಾವಣಿ ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ. ಕೋಚ್‌ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್‌ಇಡಿ, ಒವೆನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್ ಗಳಿವೆ. ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.
ಮಂಗಳೂರು-ಮತ್ತು ಬೆಂಗಳೂರು ನಡುವೆ ಸಂಚರಿಸುವ ಹಗಲು ರೈಲಿನಲ್ಲಿ ವಿಸ್ಡಾಡೋನ್ ಕೋಚ್ ಅಳವಡಿಸಲಾಗಿದ್ದು,ಮೊದಲ ಪಯಣದಲ್ಲಿ 84 ಆಸನಗಳ ಪೈಕಿ 73 ಆಸನಗಳು ಈಗಾಗಲೇ ಭರ್ತಿಯಾಗಿವೆ..ಸುಬ್ರಹ್ಮಣ್ಯ, ಸಕಲೇಶಪುರದ ಪಶ್ಚಿಮ ಘಟ್ಟ ಪ್ರದೇಶಗಳ ಅದ್ಭುತ ಸೌಂದರ್ಯ ನೋಡಲು ವಿಸ್ಡಾಡೋನ್ ಕೋಚ್ ಪ್ರಯಾಣದಿಂದ ಅವಕಾಶ ಸಿಗಲಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

/

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement