ಮೆಹುಲ್ ಚೋಕ್ಸಿಗೆ ವೈದ್ಯಕೀಯ ಜಾಮೀನು ನೀಡಿದ ಡೊಮಿನಿಕಾ ನ್ಯಾಯಾಲಯ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಎಸಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸೋಮವಾರ ವೈದ್ಯಕೀಯ ಜಾಮೀನು ಮಂಜೂರಾಗಿದೆ. ಆಂಟಿಗುವಾಗೆ ಚಿಕಿತ್ಸೆ ಕಾರಣಕ್ಕೆ ತೆರಳಲು ಆರೋಪಿ ಮೆಹುಲ್ ಚೋಕ್ಸಿಗೆ ಡೊಮಿನಿಕಾದ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2018ರಲ್ಲಿ ಚೋಕ್ಸಿ ಭಾರತ ತೊರೆದು ಆಂಟಿಗುವಾಗೆ ಪರಾರಿಯಾಗಿದ್ದರು. ಭಾರತದಲ್ಲಿ ತಮ್ಮ ವಿರುದ್ಧ ಕಾನೂನು ಕ್ರಮ ಶುರುವಾಗುತ್ತಿದ್ದಂತೆ ಅಕ್ರಮವಾಗಿ … Continued

ಮಾನ್ಸೂನ್ ಅಧಿವೇಶನದಲ್ಲಿ ಜನಸಂಖ್ಯಾ ನಿಯಂತ್ರಣ, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಂಸದರ ಸಿದ್ಧತೆ

ನವದೆಹಲಿ: ಮುಂಬರುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಸಂಸದರು ಜನಸಂಖ್ಯೆ ನಿಯಂತ್ರಣ ಮತ್ತು ಏಕರೂಪದ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಸಂಸದರು ಜನಸಂಖ್ಯೆ ನಿಯಂತ್ರಣ ಮತ್ತು ಏಕರೂಪದ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಗಳನ್ನು ಪರಿಚಯಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಬಿಜೆಪಿ ಆಡಳಿತವಿರುವ … Continued

ಮೇಘಸ್ಫೋಟ: ವಿಡಿಯೊದಲ್ಲಿ ಸೆರೆಯಾದ ಹಿಮಾಚಲದ ಧರ್ಮಶಾಲಾ ಪ್ರವಾಹದ ಭಯಾನಕ ದೃಶ್ಯ..!

ಧರ್ಮಶಾಲಾ: ಧರ್ಮಶಾಲಾದಲ್ಲಿ ಮೇಘಸ್ಫೋಟದಿಂದಾಗಿ  ಭಾರಿ ಮಳೆಯಿಂದ ಪ್ರವಾಹಕ್ಕೆಉಂಟಾಗಿದ್ದು , ವಾಹನಗಳನ್ನು ಕೊಚ್ಚಿಕೊಂಡು ಹೋಗಿದೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದೆ. ಹಲವಾರು ವೀಡಿಯೊಗಳನ್ನು ಸ್ಥಳೀಯರು ಮತ್ತು ಅಧಿಕಾರಿಗಳು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. . ಕೆಲ ಕಟ್ಟಡಗಳು ಕುಸಿದಿದೆ. ಈ ಕುರಿತ ಭಯಾನಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ. ನಿಲುಗಡೆ ಮಾಡಿದ ವಾಹನಗಳನ್ನು ಕೊಚ್ಚಿಕೊಂಡು ಭಾರಿ … Continued

ಮಹದಾಯಿ ಯೋಜನೆ, ರೈತ ಸಮಸ್ಯೆಗಳ ಬಗ್ಗೆ ಚರ್ಚಿಸಲು ನರಗುಂದಲ್ಲಿ ಜುಲೈ 16ರಂದು ರೈತರ ಸಭೆ: ಸೊಬರದಮಠ

ನರಗುಂದ: ರೈತಸೇನಾ ಕರ್ನಾಟಕ ನೇತೃತ್ವದಲ್ಲಿ ಜುಲೈ 16ರಂದು (ಶುಕ್ರವಾರ) ನರಗುಂದದ ಹೋರಾಟ ವೇದಿಕೆಯಲ್ಲಿ ಮಹದಾಯಿ ಯೋಜನೆಯ ಬಗ್ಗೆ ಮತ್ತು ರೈತ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಮುಂದಿನ ಹೋರಾಟ ರೂಪಿಸುವ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ರೈತಸೇನೆ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದ್ದಾರೆ. ಮಲಪ್ರಭಾ ನದಿಗೆ ಮಹದಾಯಿ ನದಿ … Continued

ಹುಬ್ಬಳ್ಳಿಯಲ್ಲಿ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ಕೇಂದ್ರಕ್ಕೆ ಚಾಲನೆ ನೀಡಿದ ಡಿಸಿಎಂ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಡಿಜಿಟಲ್ ಎಕನಾಮಿಯಲ್ಲಿ ಮೊದಲ ಸ್ಥಾನದಲ್ಲಿದೆ. ಸದ್ಯ ರಾಜ್ಯದ ಐಟಿ/ ಬಿಟಿ ವಲಯದಿಂದ 54 ಬಿಲಿಯನ್ ಡಾಲರ್ ದೇಶದ ಆರ್ಥಿಕತೆಗೆ ಸೇರುತ್ತಿದೆ. ಇದನ್ನು 300 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಬೆಂಗಳೂರು ಟೆಕ್ ಸಮಿಟ್‌ಗಿಂತ ಪೂರ್ವಭಾವಿಯಾಗಿ ಹುಬ್ಬಳ್ಳಿಯಲ್ಲಿ ಬರುವ ಸೆಪ್ಟಂಬರ್ ಅಥವಾ ಅಕ್ಟೋಬರ್‌‌ನಲ್ಲಿ ಸಮಾವೇಶ ಆಯೋಜಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ … Continued

ಮೇಕೆದಾಟು ಯಾವುದೇ ಕಾರಣಕ್ಕೂ ಯೋಜನೆ ನಿಲ್ಲುವುದಿಲ್ಲ :ಸಚಿವ ಬೊಮ್ಮಾಯಿ

ಬೆಂಗಳೂರು: ಕುಡಿಯುವ ನೀರಿನ ಉದ್ದೇಶದೊಂದಿಗೆ ರೂಪುಗೊಂಡಿರುವ ಮೇಕೆದಾಟು ಯೋಜನೆ ನಿಲ್ಲಿಸುವುದಿಲ್ಲ. ಇದು‌ ನಮ್ಮ ರಾಜ್ಯದ ಹಕ್ಕು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ಕೈಗೊಂಡ ನಿರ್ಣಯಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆಗೆ … Continued

ತಮಿಳುನಾಡು ಸರ್ವಪಕ್ಷ ಸಭೆಯಲ್ಲಿ ಮೇಕೆದಾಟು ಯೋಜನೆಗೆ ವಿರೋಧ; ತಿರಸ್ಕರಿಸಲು ಕೇಂದ್ರಕ್ಕೆ ಒತ್ತಾಯಿಸಲು ನಿರ್ಧಾರ

ಚೆನ್ನೈ: ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರ ಇಂದು ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ಇಂದು (ಸೋಮವಾರ) ತಮಿಳುನಾಡು ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಯಿತು. ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, … Continued

ಕರ್ನಾಟಕದಲ್ಲಿ ಸೋಮವಾರ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳ ಬಳಿಕ ಕೊರೊನಾ ಸೋಂಕಿನ ಸಂಖ್ಯೆ ಅತಿ ಕಡಿಮೆ ದಾಖಲಾಗಿದ್ದು ಸೋಮವಾರ 1386 ಮಂದಿಯಲ್ಲಿ ಹೊಸ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 61 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೊತೆಗೆ ಚೇತರಿಕೆಯ ಸಂಖ್ಯೆ ದ್ವಿಗುಣಗೊಂಡಿದ್ದು 3204 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ರಾಜ್ಯದಲ್ಲಿ ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.26ರಷ್ಟು ಇದೆ. ಹಲವು ಜಿಲ್ಲೆಗಳಲ್ಲಿ … Continued

ಗಣಿ ಇಲಾಖೆಯಿಂದ ಡಿಜಿಟಲ್ ಮೈನಿಂಗ್ ಅದಾಲತ್ ಜಾರಿಗೆ ಚಿಂತನೆ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಗಣಿ ಇಲಾಖೆಯಲ್ಲಿ ಬಾಕಿ ಇರುವ ಅಂದಾಜು ೬ ಸಾವಿರ ಅರ್ಜಿಗಳು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರ ಮಾಡಲು ಗಣಿ ಇಲಾಖೆ ಡಿಜಿಟಲ್ ಮೈನಿಂಗ್ ಅದಾಲತ್ ಜಾರಿಗೆ ತರಲು ಚಿಂತನೆ ನಡೆಸಿದೆ. ಕಳೆದ ೧೫ ವರ್ಷಗಳಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟಂತೆ ವಿವಿಧ ಉತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದ ೬ ಸಾವಿರ ಅರ್ಜಿಗಳು ಬಾಕಿ … Continued

ಕೈಗಾರಿಕಾ ಕಾರಿಡಾರ್‌ ನಿರ್ಮಾಣಕ್ಕೆ 5 ಸಾವಿರ ಎಕರೆ ಭೂ ಸ್ವಾಧೀನಕ್ಕೆ ನಿರ್ಣಯ: ಶೆಟ್ಟರ್

ಹುಬ್ಬಳ್ಳಿ: ಮಮ್ಮಿಗಟ್ಟಿ ಕೈಗಾರಿಕಾ ವಸಾಹತು ನಂತರ ಧಾರವಾಡ ಜಿಲ್ಲೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಲು 5 ಸಾವಿರ ಎಕರೆ ಭೂ ಸ್ವಾಧೀನಕ್ಕೆ ನಿರ್ಣಯಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಗೋಕುಲ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಪ್ಯಾಕೇಜ್ 04ರ ಅಡಿ … Continued