ಕರ್ನಾಟಕದಲ್ಲಿ ಸೋಮವಾರ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳ ಬಳಿಕ ಕೊರೊನಾ ಸೋಂಕಿನ ಸಂಖ್ಯೆ ಅತಿ ಕಡಿಮೆ ದಾಖಲಾಗಿದ್ದು ಸೋಮವಾರ 1386 ಮಂದಿಯಲ್ಲಿ ಹೊಸ ಸೋಂಕು ದಾಖಲಾಗಿದೆ.
ಇದೇ ಸಮಯದಲ್ಲಿ 61 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೊತೆಗೆ ಚೇತರಿಕೆಯ ಸಂಖ್ಯೆ ದ್ವಿಗುಣಗೊಂಡಿದ್ದು 3204 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ
ರಾಜ್ಯದಲ್ಲಿ ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.26ರಷ್ಟು ಇದೆ. ಹಲವು ಜಿಲ್ಲೆಗಳಲ್ಲಿ ನಿನ್ನೆಗಿಂತ ಸೋಂಕು ತುಸು ಏರಿಕೆಯಾಗಿದ್ದು ಇನ್ನೂ ಕೆಲವು ಜಿಲ್ಲೆಗಳಲ್ಲಿ ನಿನ್ನೆಗಿಂತ ಕಡಿಮೆ ಸೋಂಕಿನ ಸಂಖ್ಯೆ ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,72,684 ಮಂದಿಗೆ ಏರಿಕೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,01,907ಕ್ಕೆ ಹೆಚ್ಚಳವಾಗಿದೆ. 35,896 ಮಂದಿ ಒಟ್ಟಾರೆಯಾಗಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಳಿಕೆ..:
ರಾಜಧಾನಿ ಬೆಂಗಳೂರಿನಲ್ಲಿ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ. ಸೋಮವಾರ 319 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 9 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ 784 ಮಂದಿ ಚೇತರಿಸಿಕೊಂಡಿದ್ದಾರೆ.

ಜಿಲ್ಲಾವಾರು ಮಾಹಿತಿಯನ್ನು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

12-07-2021 HMB Kannada

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement