ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರೀ ಮಳೆ ನಿರೀಕ್ಷೆ

ಬೆಂಗಳೂರು: ಕೆಲದಿನಗಳಿಂದ ನಾಪತ್ತೆಯಾ ಆತಂಕ ಮೂಡಿಸಿದ್ದ ಮುಂಗಾರು ಮಳೆ ಕರ್ನಾಟಕದಲ್ಲಿ ಮತ್ತೆ ಜೀವ ಪಡೆದುಕೊಂಡಿದೆ. ಎಲ್ಲೆಡೆ ವರುಣನ ಆರ್ಭಟ ಜೋರಾಗುತ್ತಿದೆ.
ಕರಾವಳಿ ಭಾಗದಲ್ಲಿ ಭಾರೀ ಮಳೆಯ ಜತೆಗೆ ಗಾಳಿಯ ರಭಸವೂ ಹೆಚ್ಚಾಗಿದೆ. ಮಲೆನಾಡು ಭಾಗದಲ್ಲಿ ಸೋಮವಾರ ಮುಂಜಾನೆಯಿಂದ ಮತ್ತೆ ಮಳೆ ಜೋರಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು (ಜುಲೈ 12) ಮತ್ತು ನಾಳೆ (ಜುಲೈ 13, ಮಂಗಳವಾರ) ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿವೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.
ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜುಲೈ 15ರ ತನಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ಸಮುದ್ರದಲ್ಲಿ 3 ಮೀಟರ್ ಗಳಿಗೂ ಹೆಚ್ಚು ಎತ್ತರದ ತನಕ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಮುಂದಿನ ಒಂದು ವಾರ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದೆ ಸಾಧಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆ ಜೋರಾದ ಪರಿಣಾಮ ನದಿಗಳು ಮೈದುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಕಳೆದೆರಡು ದಿನಗಳಿಂದ ಕೃಷ್ಣಾ ನದಿ ಅಚ್ಚುಕಟ್ಟಿನ ಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಆಲಮಟ್ಟಿಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ತಂಪಾದ ವಾತಾವರಣ ಇದೆ. ಸದ್ಯ ಇನ್ನೂ ಒಂದು ವಾರ ಇದೇ ರೀತಿ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement