ನನಗೂ ಸಿಎಂ ಆಗುವ ಆಸೆ-ಅರ್ಹತೆ ಎರಡೂ ಇದೆ: ಸಚಿವ ಉಮೇಶ ಕತ್ತಿ

ಧಾರವಾಡ: ಮುಖ್ಯಮಂತ್ರಿ ಬಗ್ಗೆ ಪಕ್ಷದ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ. ನಾನೂ ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೂ ಇದೆ. ಆಸೆಯೂ ಇದೆ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ಮಾರ್ಮಿಕವಾಗಿ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಮುಖ್ಯಮಂತ್ರಿ ಆದ ಬಳಿಕ ಪ್ರಧಾನಮಂತ್ರಿ ಆಗುವ ಆಸೆ ಇದ್ದೇ ಇರುತ್ತದೆ ಎಂದು ಹೇಳಿದರು. ಉತ್ತರ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ಶಾಸಕ ಅರವಿಂದ ಬೆಲ್ಲದಮುಖ್ಯಮಂತ್ರಿ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲ್ಲದ ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ಮರುಪ್ರಶ್ನಿಸಿದರು. ನಾನೂ ಆಗಬಹುದು, ಬೆಲ್ಲದ ಅವರೂ ಆಗಬಹುದು ನಿರಾಣಿ ಅವರೂ ಆಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.
ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ, ನಾನು ಉತ್ತರ ಕರ್ನಾಟಕದ ಜನರನ್ನು ಎಬ್ಬಿಸಬೇಕಾಗುತ್ತದೆ.ಕೃಷ್ಣಾ ಮೇಲ್ದಂಡೆ ಯೋಜನೆ ಇತ್ಯಾದಿ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲೇಬೇಕಾಗುತ್ತದೆ. ಹೀಗೆಂದಾಕ್ಷಣ ಪ್ರತ್ಯೇಕವಾಗುವುದು ಎಂದರ್ಥವಲ್ಲ. ಈ ಭಾಗಕ್ಕೆ ಅನ್ಯಾಯವಾದರೆ ಉತ್ತರ ಕರ್ನಾಟಕವನ್ನು ಧ್ವನಿ ಎತ್ತಲೇಬೇಕಾಗುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯನವರ ಸರ್ಕಾರ ಶೇ ೧೦ ಸರ್ಕಾರ ಎಂದು ರಾಜ್ಯದ ಜನರ ಮಾತನಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಹಾಗೆ ನಡೆದಿದ್ದರೆ ಕಾಂಗ್ರೆಸ್ ನವರು ಕೋರ್ಟಿಗೆ ಹೋಗಲಿ ಎಂದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement