ಹುಬ್ಬಳ್ಳಿ-ಧಾರವಾಡ ರೌಡಿಗಳಿಗೆ ಪೊಲೀಸರ ಶಾಕ್ ! ಕ್ರಿಮಿನಲ್ ಹಿನ್ನೆಲೆಯವರ ಮನೆ ಶೋಧ–ಮಾರಕಾಸ್ತ್ರ, ಜಪ್ತಿ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಕಮೀಶನರೇಟ್ ವ್ಯಾಪ್ತಿಯಲ್ಲಿ ಮಂಗಳವಾರ ಪೊಲೀಸರು ೬೦೦ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದಾರೆ.
ನಗರದ ಹುಬ್ಬಳ್ಳಿ ಉತ್ತರ, ದಕ್ಷಿಣ ಹಾಗೂ ಧಾರವಾಡ ಎಸಿಪಿ ವ್ಯಾಪ್ತಿಯ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಅಪರಾಧ ಪ್ರಕರಣಗಳು, ಮೀಟರ್ ಬಡ್ಡಿ ದಂಧೆ, ವೈಯಕ್ತಿಕ ದ್ವೇಷಕ್ಕಾಗಿ ಹಲ್ಲೆ ಮೊದಲಾದ ಪ್ರಕರಣಗಳು ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಲಾಬೂರಾಮ್, ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ ಹಿನ್ನೆಲೆಯಲ್ಲಿ ಎಸಿಪಿಗಳಾದ ವಿನೋದ ಮುಕ್ತೆದಾರ, ಆರ್.ಕೆಪಾಟೀಲ ಹಾಗೂ ಅನುಷಾ ಮಾರ್ಗದರ್ಶನದಲ್ಲಿ ಈ ದಾಳಿಗಳು ನಡೆಯಿತು.
ಉತ್ತರ ವಿಭಾಗದಲ್ಲೇ ಸುಮಾರು ೨೫೦ಕ್ಕೂ ಅಧಿಕ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು ಕೆಲವೆಡೆ ಮಾರಕಾಸ್ತçಗಳು, ಲಾಂಗ್ ಪತ್ತೆಯಾಗಿದೆ. ಹುಬ್ಬಳ್ಳಿಯ ಕಮರಿಪೇಟೆ, ಕೇಶ್ವಾಪುರದಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ.
ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಎಸಿಪಿ ಮುಕ್ತೆದಾರ, ಇನ್ಸಪೆಕ್ಟರ್ ಜಗದೀಶ ಹಂಚಿನಾಳ ನೇತ್ರತ್ವದಲ್ಲಿ ೨೧ ರೌಡಿಗಳ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ದಕ್ಷಿಣ ವಿಭಾಗದಲ್ಲೂ ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿ ಸುಮಾರು ೨೫೦ ಕ್ರಿಮಿನಲ್ ಹಿನ್ನೆಲೆ ಉಳ್ಳವರ ಮನೆ ಮೇಲೆ ದಾಳಿ ನಡೆಸಿದ್ದು,ಹಳೇಹುಬ್ಬಳ್ಳಿ, ಘಂಟಿಕೇರಿ ಮುಂತಾದೆಡೆ ಮಾರಕಾಸ್ತ್ರ ಸಿಕ್ಕಿದ್ದು, ಸುಮಾರು ೭ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಧಾರವಾಡ ವಿಭಾಗ ವ್ಯಾಪ್ತಿಯಲ್ಲಿ ಇನ್ಸಪೆಕ್ಟರ್ ಗಳಾದ ಸಂಗಮೇಶ ದಿಡಿಗನಾಳ, ರಮೇಶ ಹೂಗಾರ, ಬಸಾಪುರ ಮುಂತಾದವರು ಠಾಣೆ ಹದ್ದಿನಲ್ಲಿ ದಾಳಿ ಮಾಡಿದ್ದು, ನೂರಕ್ಕೂ ಹೆಚ್ಚು ರೌಡಿಗಳ ಮನೆ ಶೋಧಿಸಲಾಗಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement