ಆನ್ಲೈ‌ನ್ ಕಲಿಕೆ ವಿಸ್ತರಣೆಗೆ 5,766 ಗ್ರಾಪಂ ಗ್ರಂಥಾಲಯಗಳಲ್ಲಿ ಟಿವಿ ಸೆಟ್ ಅಳವಡಿಕೆಗೆ ಸಿದ್ಧತೆ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ಧೇಶದಿಂದ ಆನಲೈನ್ ಕಲಿಕೆ ವಿಸ್ತರಣೆಗೆ ರಾಜ್ಯಸರಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗ ಮಾತನಾಡಿರುವ ಅವರು, ಇದಕ್ಕಾಗಿ ರಾಜ್ಯದ 5,766 ಜಿಲ್ಲಾ ಪಂಚಾಯತ್ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಟೆಲಿವಿಷನ್ ಸೆಟ್ ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ.

ಅಸಮರ್ಪಕ ಇಂಟರ್ನೆಟ್ ಸಂಪರ್ಕ, ಗ್ಯಾಜೆಟ್ ಗಳ ಅಲಭ್ಯತೆ ಮತ್ತು ನೆಟ್ವರ್ಕ್ ಸಮಸ್ಯೆಗಳು ಆನಲೈನ್ ತರಗತಿಗಳಿಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿರುವುದರಿಂದ, ಕರ್ನಾಟಕ ಸರ್ಕಾರವು ಆನಲೈನ್ ಶಿಕ್ಷಣವನ್ನು ನೀಡಲು ರಾಜ್ಯದಾದ್ಯಂತ ಇರುವ ಗ್ರಾಮ ಪಂಚಾಯಿತಿ (ಜಿಪಿ) ಗ್ರಂಥಾಲಯಗಳಲ್ಲಿ ಲಭ್ಯವಿರುವ ಸ್ಥಳ ಮತ್ತು ಮೂಲಸೌಕರ್ಯಗಳನ್ನು ಬಳಸಿ ಅಲ್ಲಿ ಟಿವಿ ಸೆಟ್ ಗಳನ್ನು ಅಳವಡಿಸುವ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಳೆಗಾಲದಲ್ಲಿ ಅನೇಕ ಭಾಗಗಳಲ್ಲಿ ಆನ್ಲೈನ್ ಶಾಲೆಗಳಿಗೂ ಸಹ ಅಡೆತಡೆಗಳು ಇವೆ.   ಈ ಎಲ್ಲಾ  ಬಗೆಗಿನ ಅರಿವು ರಾಜ್ಯ ಸರಕಾರಕ್ಕೂ ಇದೆ. ಆದರೆ, ಕೊರೋನಾ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ದೈಹಿಕ ತರಗತಿಗಳ ಪ್ರಾರಂಭ ವಿಳಂಬವಾಗುವುದರಿಂದ ಆನ್ಲೈನ್ ತರಗತಿಗಳನ್ನು ಅವಲಂಬನೆ ಅನಿವಾರ್ಯವಾಗಿದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕಗಳನ್ನು ಬಲಪಡಿಸುವುದು ಮುಖ್ಯವಾಗಿದೆ. ಇದು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ನಿರಂತರತೆಯನ್ನು ಖಚಿತಪಡಿಸುತ್ತದೆ. ಆದರೆ, ನೆಟ್ವರ್ಕ್ ಸಮಸ್ಯೆ ಸಹ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ ರಾಜ್ಯದ 93.01 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ.33ರಷ್ಟು ವಿದ್ಯಾರ್ಥಿಗಳಿಗೆ ಆನ್ಲೈನ್ ಕಲಿಕೆಗೆ ಅನುಕೂಲವಾಗುವಂತೆ ಮೊಬೈಲ್ ಫೋನ್, ಕಂಪ್ಯೂಟರ್, ಟ್ಯಾಬ್ಲೆಟ್ ಮತ್ತು ಇತರ ಗ್ಯಾಜೆಟ್ ಗಳು ಲಭ್ಯವಿಲ್ಲ.

ಚಾಮರಾಜನಗರವು ಇಂಟರ್ನೆಟ್ ಸೌಲಭ್ಯವನ್ನು ಹೊಂದಿರುವ ವಿದ್ಯಾರ್ಥಿಗಳ ಕಡಿಮೆ ಪಾಲನ್ನು (೩೮.೯೨%) ವರದಿ ಮಾಡಿದರೆ, ಬೆಳಗಾವಿ, ಬಳ್ಳಾರಿ, ಬೀದರ್, ಚಿತ್ರದುರ್ಗ, ಕಲಬುರಗಿ, ಕೊಪ್ಪಳ, ದಾವಣಗೆರೆ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಈ ಪ್ರಮಾಣ ಸಾಕಷ್ಟು ಕಡಿಮೆ ಇದೆ. ರಾಜ್ಯದಲ್ಲಿ ಉತ್ತಮ ಇಂಟರ್ನೆಟ್ ವ್ಯವಸ್ಥೆ ಹೊಂದಿರುವ ಜಿಲ್ಲೆಗಳೆಂದರೆ ಬೆಂಗಳೂರು ದಕ್ಷಿಣ (೭೪.೬೪%), ಉಡುಪಿ (೭೧.೮೭%), ಮತ್ತು ಬೆಂಗಳೂರು ಉತ್ತರ (೭೧.೫೩%).

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ.40ರಷ್ಟು ವಿದ್ಯಾರ್ಥಿಗಳಿಗೆ ಇಂಟರ್ನೆಟ್ ಇಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement