ಕರ್ನಾಟಕದಲ್ಲಿ ದೈನಂದಿನ ಸೋಂಕಿನಲ್ಲಿ ತುಸು ಏರಿಕೆ, ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಳಿಕೆಯಾಗಿದ್ದ ಕೊರೊನಾ ಸೋಂಕಿನ ಸಂಖ್ಯೆ ಮಂಗಳವಾರ ಸ್ವಲ್ಪ ಹೆಚ್ಚಾಗಿದ್ದು ಸಾವಿನ ಸಂಖ್ಯೆ ಕಡಿಮೆಯಾಗಿದೆ.
ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 1913 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 48 ಮಂದಿ ಮೃತಪಟ್ಟಿದ್ದಾರೆ ಇದೇ ಸಮಸಯದಲ್ಲಿ 2489 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,74,597 ಮಂದಿಗೆ ಏರಿಕೆಯಾಗಿದೆ. ಇಲ್ಲಿಯ ತನಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,04,396 ಕ್ಕೆ ಹೆಚ್ಚಳವಾಗಿದೆ .
ವಿಜಯಪುರ ಜಿಲ್ಲೆಯಲ್ಲಿ ಯಾವುದೇ ಸೋಂಕು ಪ್ರಕರಣಗಳು ದೃಢಪಟ್ಟಿಲ್ಲ. ಉಳಿದಂತೆ ಹಲವು ಜಿಲ್ಲೆಗಳಲ್ಲಿ ಹತ್ತರ ಒಳಗೆ ಸೋಂಕು ದಾಖಲಾಗಿದೆ
ಜೊತೆಗೆ 35,944 ಮಂದಿ ಒಟ್ಟಾರೆಯಾಗಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ
ರಾಜ್ಯದಲ್ಲಿ ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.53 ಹೆಚ್ಚಾಗಿದೆ. ಸಾವಿನ ಪ್ರತಿಶತ ಶೇ.2.50 ಕ್ಕೆ ಕುಸಿದಿದೆ.
ಹಲವು ಜಿಲ್ಲೆಗಳಲ್ಲಿ ನಿನ್ನೆಗಿಂತ ಸೋಂಕು ತುಸು ಏರಿಕೆಯಾಗಿದ್ದು ಇನ್ನೂ ಕೆಲವು ಜಿಲ್ಲೆಗಳಲ್ಲಿ ನಿನ್ನೆಗಿಂತ ಕಡಿಮೆ ಸೋಂಕಿನ ಸಂಖ್ಯೆ ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಹೆಚ್ಚಳ
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಗಿಂತ ಸೋಂಕು ಏರಿಕೆಯಾಗಿದ್ದು ಸಾವಿನ ಸಂಖ್ಯೆ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 402 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 8 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ 707 ಮಂದಿ ಚೇತರಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

13-07-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement