ಕರ್ನಾಟಕದಲ್ಲೂ ನೂತನ ಜನಸಂಖ್ಯಾ ನೀತಿ ಜಾರಿಗೆ ಇದು ಸಕಾಲ: ಸಿ.ಟಿ.ರವಿ ಟ್ವೀಟ್‌

posted in: ರಾಜ್ಯ | 0

ಬೆಂಗಳೂರು: ಕರ್ನಾಟಕವು ತನ್ನ ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲು ಇದು ಸಕಾಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.

ಉತ್ತರಪ್ರದೇಶ ಸರಕಾರ ಎರಡು ಮಕ್ಕಳ ನೀತಿಯನ್ನು ಜಾರಿಗೆ ತರಲು ಉತ್ತರ ಪ್ರದೇಶವು ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಬಿಡುಗಡೆ ಮಾಡಿರುವ ಸಂದರ್ಭದಲ್ಲಿಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದೇ ರೀತಿಯ ಕಾನೂನನ್ನು ತರಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಮ್ಮ ಟ್ವೀಟರ್ ನಲ್ಲಿ ಜನಸಂಖ್ಯೆ ಸ್ಫೋಟವಾದರೆ ಸೀಮಿತ ನೈಸರ್ಗಿಕ ಸಂಪತ್ತಿನಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನೂ ಪೂರೈಸುವುದು ತುಂಬ ಕಷ್ಟವಾಗುತ್ತದೆ. ಹೀಗಾಗಿ, ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರಪ್ರದೇಶ ಮತ್ತು ಅಸ್ಸಾಂ ರಾಜ್ಯಗಳ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸ ನೀತಿ ಅಳವಡಿಸಿಕೊಳ್ಳಲು ಇದು ಅತ್ಯಂತ ಸೂಕ್ತ ಕಾಲ ಎಂದು ತಿಳಿಸಿದ್ದಾರೆ.

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದವವರಿಗೆ ಸರ್ಕಾರಿ ಸೌಲಭ್ಯಗಳಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಹೊಸ ನೀತಿಯನ್ನು ಹೊರಡಿಸಿದೆ. ಅಂತೆಯೇ ಅಸ್ಸಾಂನಲ್ಲೂ ಎರಡು ಮಕ್ಕಳ ನೀತಿಯನ್ನು ಶೀಘ್ರವೇ ಜಾರಿಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement