ಗಮನಿಸಿ..ಪರೀಕ್ಷಾ ದಿನವಾದ ಜುಲೈ 19, 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್​ಆರ್​ಟಿಸಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪರೀಕ್ಷೆಯ ದಿನಗಳಾದ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.
ಈ ಕುರಿತುಟಿವಿ9 ಕನ್ನಡ.ಕಾಮ್‌ ವರದಿ ಮಾಡಿದೆ.   ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ಈಹಾಲ್‌ ಟಿಕೆಟ್‌) ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಈ ವಿಚಾರದ ಕುರಿತು ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ತನಕ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ. ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಯಾವುದೇ ಶುಲ್ಕ ತೆರಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ವರದಿ ಹೇಳಿದೆ.
ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement