ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ 17 ಜನರ ವಿರುದ್ಧ ಎಫ್‍ಐಆರ್

ಬೆಂಗಳೂರು: ಬೆಂಗಳೂರು ನಗರದ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ.
ನಗರದಲ್ಲಿ ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಅನುಮತಿಯನ್ನ ಕೇಳಿದ್ದರೂ ಕೋವಿಡ್ ನಿಯಮದಂತೆ ಅನುಮತಿ ನಿರಾಕರಿಸಲಾಗಿತ್ತು. ಅದಾಗ್ಯೂ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.
ಈ ಪ್ರತಿಭಟನೆ ನೇತೃತ್ವವನ್ನು ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಹಿಸಿದ್ದರು. ಈ ಪ್ರತಿಭಟನೆಗೆ ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳದೇ, ಸರ್ಕಾರದ ಕೊರೊನಾ ಹಾಗೂ ಲಾಕ್ ಡೌನ್ ನಿಯಮಾವಳಿಗಳನ್ನ ಉಲ್ಲಂಘಿಸಲಾಗಿದೆ ಎಂದು ಎಫ್.ಐ.ಆರ್ ನಲ್ಲಿ ಉಲ್ಲೇಖಿಸಿಲಾಗಿದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement