ದೇಶಾದ್ಯಂತ ನೈರುತ್ಯ ಮುಂಗಾರು ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ

ಬೆಂಗಳೂರು:  ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮಳೆಯಾಗುತ್ತಿದೆ. ದೇಶದಲ್ಲೂ ಮೊದಲ ಬಾರಿಗೆ ನೈರುತ್ಯ ಮುಂಗಾರು ಆರ್ಭಟ ಎಲ್ಲೆಡೆ ವ್ಯಾಪಿಸಿದೆ. ದೇಶಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ  ಜುಲೈ ೧೬ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

ದೇಶದೆಲ್ಲೆಡೆ ನೈರುತ್ಯ ಮುಂಗಾರು ಅಬ್ಬರ ಜೋರಾಗಿದ್ದು, ದಕ್ಷಿಣ ಭಾರತ  ಹಾಗೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಸೋಮವಾರ-ಮಂಗಳವಾರ ಸುರಿದ ಭಾರಿ ಮಳೆಗೆ ಉತ್ತರ ಪ್ರದೇಶ ,  ರಾಜಸ್ಥಾನ್, ಗುಜರಾತ್, ಹಿಮಾಚಲ ಪ್ರದೇಶದ ಜನ ಜೀವನ ಅಸ್ತ ವ್ಯಸ್ತವಾಗಿದೆ. ಈ ನಡುವೆ ಸುಡುವ ಬಿಸಿಲಿನಿಂದ ತತ್ತರಿಸಿರುವ ದೆಹಲಿ ಜನರು ಮಳೆಗಾಗಿ ಕಾಯುತ್ತಿದ್ದಾರೆ.

ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಕಳೆದೊಂದು ವಾರದಿಂದ ವಿರಾಮ ನೀಡಿದ್ದ ಮಳೆ ಕಳೆದ ಮೂರು ದಿನಗಳಿಂದ ಬಿರುಸು ಕೊಂಡಿದೆ. ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನು ಮೂರು ದಿನ ಇದೇ ರೀತಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಏಳುವ ಗಾಳಿಯಿಂದ ಅಲೆಗಳ ಹೊಡೆತ ಇನ್ನಷ್ಟು ಹೆಚ್ಚಲಿದ್ದು, ಕಡಲ ಕೊರೆತ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್ ಆಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : ಅಮೇಥಿಯಲ್ಲಿ ಸ್ಪರ್ಧೆ ವಿಚಾರ, ರಾಹುಲ್‌ ಗಾಂಧಿ ಹೇಳಿದ್ದೇನು..?

ಜೂನ್ ತಿಂಗಳಲ್ಲಿ ವಾಡಿಕೆ ಮಳೆ ಕೊರತೆ ಅನುಭವಿಸಿದ್ದ ಕೇರಳದಲ್ಲಿ ಮುಂದಿನ ನಾಲ್ಕು ದಿನ ಭಾರೀ ಪ್ರಮಾಣದ ಮಳೆಯಾಗಲಿದ್ದು, ಇಡುಕ್ಕಿ, ಕಣ್ಣೂರು, ಕಸರಾಗೋಡ್ ಆರೆಂಜ್ ಆಲರ್ಟ್, ಮತ್ತು ಉಳಿದ ಜಿಲ್ಲೆಗಳಲ್ಲಿ ಹಳದಿ ಆಲರ್ಟ್ ಘೋಷಿಸಲಾಗಿದೆ. ಮಳೆ ಹಿನ್ನಲೆ ಜನರು ಎಚ್ಚರಿಕೆ ವಹಿಸುವಂತೆ ಐಎಂಡಿ ತಿಳಿಸಿದೆ. ಕೇರಳದಲ್ಲಿ ಕಳೆದ ೩೯ ವರ್ಷಗಳಲ್ಲಿಯೇ ಅತಿ ಕಡಿಮೆಯಾಗಿದೆ.

ತಮಿಳುನಾಡಿನ ಕೊಯಿಮತ್ತೂರು, ಥೆನಿ, ನೀಲಿಗಿರಿಯ ಪಶ್ವಿಮ ಘಟ್ಟದಲ್ಲಿ ಕೂಡ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಬಂಗಾಳ ಕೊಲ್ಲಿಯ ಮಧ್ಯ ಪಶ್ಚಿಮ ಮತ್ತು ವಾಯುವ್ಯದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಲಿದೆ. ಈ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲೂ ಕೂಡ ಮಳೆಯಾಗಲಿದೆ. ಆಂಧ್ರ ಪ್ರದೇಶದ ರಾಯಲ್ ಸೀಮಾದಲ್ಲಿ ಕೂಡ ಸಾಧಾರಣಾ ಮಳೆಯಾದರೆ, ಪೂರ್ವ ಗೋದಾವರಿ, ವಿಶಾಖ ಪಟ್ಟಣಂನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement