ಕೆ. ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿ ಪ್ರಕಟ: ವಿಠಲದಾಸ ಕಾಮತ್‌, ಜಯರಾಮ ಹೆಗಡೆಗೆ ಪ್ರಶಸ್ತಿ

posted in: ರಾಜ್ಯ | 0

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿ ವರ್ಷ ಕೊಡಮಾಡುವ ಕೆ. ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
2020ನೇ ಸಾಲಿನ ಪ್ರಶಸ್ತಿಯನ್ನು ಜನಮಾಧ್ಯಮ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಜಯರಾಮ ಹೆಗಡೆ ಹಾಗೂ 2021ನೇ ಸಾಲಿನ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ತಿಳಿಸಿದ್ದಾರೆ.
ಜು.18ರಂದು ಯಲ್ಲಾಪುರದಲ್ಲಿ ನಡೆಯಲಿರುವ ಜಿಲ್ಲಾ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್-19 ಕಾರಣಕ್ಕಾಗಿ 2020ನೇ ಸಾಲಿನಲ್ಲಿ ಪ್ರಶಸ್ತಿಯನ್ನು ನೀಡದೇ ಇರುವುದರಿಂದ ಈ ಬಾರಿ ಪ್ರಶಸ್ತಿಗೆ ಜಿಲ್ಲೆಯ ಪತ್ರಕರ್ತರನ್ನು ಆಯ್ಕೆ ಮಾಡಲು ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ, ರಾಜ್ಯ ಸಮಿತಿ ಸದಸ್ಯ ಜಿ. ಸುಬ್ರಾಯ ಭಟ್ಟ ಬಕ್ಕಳ ಹಾಗೂ ಸಂಘದ ಉಪಾಧ್ಯಕ್ಷ ಬಸವರಾಜ ವಿ. ಪಾಟೀಲ ಅವರನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು ಆಯ್ಕೆ ಸಮಿತಿಗೆ ಬಂದ ಹೆಸರುಗಳಲ್ಲಿ ಹಿರಿತನವನ್ನು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರ ಒಟ್ಟಾಭಿಪ್ರಾಯವನ್ನು ಪರಿಗಣಿಸಿ ಜಯರಾಮ ಹೆಗಡೆ ಹಾಗೂ ವಿಠಲದಾಸ ಕಾಮತ್ ಅವರ ಹೆಸರುಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ