ವರದಕ್ಷಿಣೆ ಪಿಡುಗು ವಿರುದ್ಧ ಜಾಗೃತಿಗೆ ಕೇರಳ ರಾಜ್ಯಪಾಲರಿಂದ ಉಪವಾಸ

ತಿರುವನಂತಪುರ: ವರದಕ್ಷಿಣೆ ಪಿಡುಗು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದಲೇ ಕೇರಳ ರಾಜ್ಯದ ರಾಜ್ಯಪಾಲರಾಗಿರುವ ಆರಿಫ್ ಮೊಹಮ್ಮದ್ ಖಾನ್ ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ತಿರುವನಂತಪುರದ ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನ ಉಪವಾಸ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಮಂದಿ ಮಹಿಳೆಯರು ತುತ್ತಾಗಿರುವ ಪ್ರಕರಣ ಖಂಡಿಸಿ ಮತ್ತು ಪಿಡುಗಿನ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬುಧವಾರ ಬೆಳಗ್ಗೆ ೮ ಗಂಟೆಯಿಂದ ಸಂಜೆ ೬ ಗಂಟೆಯ ವರೆಗೆ ರಾಜ್ಯಪಾಲರು ಉಪವಾಸ ನಡೆಸುವ ಮೂಲಕ ವರದಕ್ಷಿಣಿ ಪಿಡುಗು ತೊಲಗಿಸುವಂತೆ ಹಾಗೂ ಇಂತಹ ಪ್ರಕರಣಗಳು ಮರಕಳಿಸದಂತೆ ಸರಕಾರ ಕ್ರಮ ಕೈಗೊಳ್ಳಬೇಕಾದ ಅಗತ್ಯತೆಯನ್ನು ಮನವರಿಕೆ ಮಾಡಿದ್ದಾರೆ.

ಕೇರಳದಲ್ಲಿ ಗಾಂಧಿ ತತ್ವ ಅನುಸರಿಸುವ ಹಲವು ಸಂಘಟನೆಗಳ ಕಾರ್ಯಕರ್ತರು ಗಾಂಧಿ ಭವನದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಉಪವಾಸ ಕೈಗೊಂಡಿದ್ದರು. ರಾಜ್ಯಪಾಲರ ಕ್ರಮಕ್ಕೆ ಬಿಜೆಪಿ ಮುಖಂಡ, ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಮುರಳೀಧರನ್ ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯಪಾಲರ ಇಚ್ಛಾಶಕ್ತಿಯನ್ನು ಕೊಂಡಾಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಪಾಕಿಸ್ತಾನದ ಜನರಲ್ಲಿ ಅತೃಪ್ತಿ ಇದೆ, ಅವರೀಗ ವಿಭಜನೆ "ತಪ್ಪು" ಎಂದು ನಂಬುತ್ತಾರೆ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement