ಸಹಕಾರಿ ಸಂಸ್ಥೆಗಳ ಚುನಾವಣೆ, ಎಲ್ಲ ಜಿಲ್ಲೆಗಳಲ್ಲೂ ಗೋಶಾಲೆ ಸ್ಥಾಪನೆಗೆ ಸಂಪುಟ ಸಭೆ ಒಪ್ಪಿಗೆ

posted in: ರಾಜ್ಯ | 0

 ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ. ಎಲ್ಲಾ ಜಿಲ್ಲೆಗಳಲ್ಲಿ ಗೋ ಶಾಲೆಗಳನ್ನು ತೆರೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.  ಸಹಕಾರಿ ಸಂಘ-ಸಂಸ್ಥೆಗಳು, ಬ್ಯಾಂಕ್ ಗಳ ಚುನಾವಣೆಗೆ ರಾಜ್ಯ ಸಚಿವ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು ಎಂದಿದ್ದಾರೆ.

ಗುರುವಾರದ ಸಂಪುಟ ಸಭೆಯಲ್ಲಿ ಸಹಕಾರ ಸಂಸ್ಥೆಗಳ ಚುನಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದ್ದು, ಆದರೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಅವರು ಅವರು ಹೇಳಿದ್ದಾರೆ.

ಬಸವಣ್ಣನವರ ಪ್ರತಿಮೆ ಸ್ಥಾಪಿಸಲು ನಿರ್ಧಾರ:

ವಿಧಾನಸೌಧ ಆವರಣದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಇದರ ಖರ್ಚು ಮತ್ತು ವೆಚ್ಚವನ್ನು ಭರಿಸಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಲನಕ್ಷೆ ರೂಪಿಸಲಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

ಆಕ್ಸಿಜನ್ ಉತ್ಪಾದಕ-ಪೂರೈಕೆದಾರರಿಗೆ ಶೇ.೨೫ರಷ್ಟು ಸುಂಕ ವಿನಾಯಿತಿ:

ಕೊರೊನಾ ಸೋಂಕಿತರ ಚಿಕಿತ್ಸೆ ನೆರವಿಗಾಗಿ ಆಕ್ಸಿಜನ್ ತಯಾರಕರು ಮತ್ತು ಪೂರೈಕೆಗೆದಾರರಿಗೆ ಮುಂದಿನ ೩ ವರ್ಷಗಳ ಕಾಲ ಶೇ.೨೫ರಷ್ಟು ಸುಂಕ ವಿನಾಯಿತಿ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಕರ್ನಾಟಕ ಗೋವಧೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿವ ಕಾರಣ, ಜಾನುವಾರುಗಳ ಸಂರಕ್ಷಣೆಗೆ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ಪ್ರತಿಯೊಂದು ಜಿಲ್ಲೆಯಲ್ಲಿ ಗೋಶಾಲೆ ನಿರ್ಮಿಸಲಾಗುವುದು. ಮೊದಲ ಹಂತದಲ್ಲಿ ₹15 ಕೋಟಿ ನೀಡಲಾಗುವುದು. ಕೆಲಸದ ಪ್ರಗತಿ ನೋಡಿಕೊಂಡು ಹೆಚ್ಚುವರಿ ಹಣ ನೀಡಲಾಗುತ್ತದೆ ಎಂದು ಹೇಳಿದರು.

ಈ ಬಾರಿ ಬೆಳೆ ಸಮೀಕ್ಷೆಯನ್ನು ಮೊಬೈಲ್‌ ಆಪ್‌ ಮೂಲಕ ನಡೆಸಲು ತೀರ್ಮಾನಿಸಲಾಗಿದೆ. ರೈತರ ಮೊಬೈಲ್ ಆಪ್‌ ಮೂಲಕ ತಮ್ಮ ಕೃಷಿ ಜಮೀನಿನ ಮಾಹಿತಿ ನೀಡಬೇಕು. ಇದಕ್ಕೆ ಅವರು ಖಾಸಗಿ ವ್ಯಕ್ತಿಗಳ ನೆರವು ಪಡೆಯಬಹುದು. ಇದಕ್ಕಾಗಿ ₹48 ಕೋಟಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಮುಂದಿನ ಫೆಬ್ರುವರಿ 9,10 ಮತ್ತು 12 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2022 ನಡೆಸಲು ತೀರ್ಮಾನಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

* ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಮೆಡ್ಲೇರಿ, ರಾಹುತನಕಟ್ಟೆ ಕೆರೆ ಸೇರಿ 18 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ₹206 ಕೋಟಿಗೆ ಅನುಮತಿ

*ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶದಲ್ಲಿ 1,100 ಹೆಕ್ಟೇರ್‌ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲು ₹240 ಕೋಟಿಗೆ ಆಡಳಿತಾತ್ಮಕ ಒಪ್ಪಿಗೆ

*ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಮುಕ್ಕಂಪಿ ಮತ್ತು ಐದು ಕೆರೆಗಳನ್ನು ತುಂಬಿಸುವ ಯೋಜನೆಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ₹93 ಕೋಟಿ ಆಡಳಿತಾತ್ಮಕ ಒಪ್ಪಿಗೆ ನೀಡಲು ತೀರ್ಮಾನ

*ಗದಗ ಪಶುವೈದ್ಯ ಶಾಲೆಯ ಮೂರನೇ ಹಂತದ ಕಾಮಗಾರಿಗೆ ₹30 ಕೋಟಿ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement