ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿ: ಭಾರತ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು..!

ಇಂಗ್ಲೆಂಡ್ ವಿರುದ್ಧ ಆಗಸ್ಟ್​ 4 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಗಾಗಿ ಬ್ರಿಟನ್ನಿಗೆ ತೆರಳಿರುವ ಟೀಮ್ ಇಂಡಿಯಾ ಆಟಗಾರರಲ್ಲಿ ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ವರದಿಯಾಗಿದೆ. ಆಟಗಾರರ ಹೆಸರನ್ನು ಗೌಪ್ಯವಾಗಿ ಇಡಲಾಗಿದ್ದು, ಶೀಘ್ರವೇ ಬಿಸಿಸಿಐಯಿಂದ ಅಧಿಕೃತ ಪ್ರಕಟಣೆ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಗಾಗಿ ಭಾರತೀಯ ಕ್ರಿಕೆಟ್​ನ 23 ಸದಸ್ಯರು ಇಂಗ್ಲೆಂಡಿಗೆ ತೆರಳಿದ್ದರು. 20 ದಿನಗಳ ವಿರಾಮದ ಬಳಿಕ ಎಲ್ಲರೂ ಬಯೋ ಬಬಲ್​ನಿಂದ ಹೊರಬಂದಿದ್ದು ಈ ವೇಳೆ ಸೋಂಕು ತಗುಲಿರಬಹುದು ಎಂದು ಹೇಳಲಾಗಿದೆ.
ಆದರೆ, ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ. ಅವರು ಸರಿಯಾದ ಸ್ಥಳದಲ್ಲಿ ಕ್ವಾರಂಟೈನ್​ನಲ್ಲಿದ್ದಾರೆ. ಅವರು ತಂಡದ ಜೊತೆ ಪ್ರಯಾಣ ಬೆಳೆಸುತ್ತಿಲ್ಲ” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಜನದಟ್ಟನೆ ಇರುವ ಸ್ಥಳಗಳಿಗೆ ಹೋಗಬಾರದು ಎಂದು ಬಿಸಿಸಿಐ ಟೀಮ್ ಇಂಡಿಯಾ ಕ್ರಿಕೆಟಿಗರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಇಂಗ್ಲೆಂಡ್​ನಲ್ಲಿ ಕೊರೋನಾ ವೈರಸ್ ಡೆಲ್ಟಾ ರೂಪಾಂತರದ ಅಪಾಯ ಬಯೋ ಬಬಲ್​ನಲ್ಲಿ ಹೆಚ್ಚಾಗಿದೆ. ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸುರಕ್ಷತೆಗೆ ನಾವು ಪ್ರೋಟೋಕಾಲ್ ಮಾಡಿದ್ದೇವೆ ಎಂದು ಇತ್ತೀಚೆಗಷ್ಟೆ ಇಸಿಬಿಯ ಮುಖ್ಯ ಕಾರ್ಯನಿರ್ವಾಹಕ ಟಾಮ್ ಹ್ಯಾರಿಸನ್ ಹೇಳಿದ್ದರು.
ಭಾರತೀಯ ತಂಡದಲ್ಲಿ ಈಗಾಗಲೇ ಯುವ ಆರಂಭಿಕ ಬ್ಯಾಟ್ಸ್‌ಮನ್‌ ಶುಬ್ಮನ್ ಗಿಲ್ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ತಂಡದ ಇಬ್ಬರು ಆಟಗಾರನಿಗೆ ಕೊರೋನಾ ದೃಢ ಪಟ್ಟಿರುವುದು ಆಘಾತಕ್ಕೆ ಕಾರಣವಾಗಿದೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್‌ ಸರಣಿ ನಡೆಯಲಿದೆ.

ಪ್ರಮುಖ ಸುದ್ದಿ :-   ಪ್ರಮುಖ ಮಾವೋವಾದಿ ನಾಯಕ ಸೇರಿ 29 ಮಂದಿ ಮಾವೋವಾದಿಗಳನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement