ಇಂದ್ರಜಿತ್‌ ಲಂಕೇಶ್‌ ದೂರು: ತನಿಖೆಗೆ ಮೈಸೂರು ಪೊಲೀಸ್‌ ಆಯುಕ್ತರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ನೀಡಿದ ದೂರನ್ನು ಆಧರಿಸಿ ತನಿಖೆ ಸೂಚಿಸಿದ್ದು, ಮೈಸೂರು ಪೊಲೀಸ್‌ ಆಯುಕ್ತರಿಗೆ ಈ ಕುರಿತು ಮಾಹಿತಿ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.
ಇಂದ್ರಜಿತ್ ಅವರು ಮಾಡಿರುವ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರ ಮನವಿ ಪತ್ರದ ಮೇಲೆ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ಮನವಿ ಪತ್ರದಲ್ಲಿ ಸ್ಪಷ್ಟವಾಗಿ ಏನೂ ಹೇಳಿಲ್ಲ. ಸಾಕ್ಷಿಗಳನ್ನು ಅವರು ನಮಗೆ ನೀಡಿಲ್ಲ.ಹೀಗಾಗಿ ಅವರು ನನಗೆ ಕೊಟ್ಟ ಮನವಿ ಮೇಲೆ ತನಿಖೆ ಮಾಡುವಂತೆ ಸೂಚಿಸಿದ್ದೇನೆ ಎಂದರು.
ಇಂದ್ರಜಿತ್ ಲಂಕೇಶ್,ಈ ಸಂಬಂಧ ಇಂದು (ಗುರುವಾರ) ಗೃಹ ಸಚಿವರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಅದರ ಕುರಿತಂತೆ ಈಗ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ.
ಇಂದ್ರಜಿತ್ ಆರೋಪ:
ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲಿನಲ್ಲಿ ದಲಿತ ವೇಟರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೇಟರ್ ಕಣ್ಣುಗಳಿಗೆ ಹಾನಿಯಾಗಿದೆ. ಈ ಘಟನೆಯ ಸಂದರ್ಭದಲ್ಲಿ ದರ್ಶನ್, ರಾಕೇಶ್, ಹರ್ಷ ಮೇಲಾಂಟ, ಮತ್ತು ಪವಿತ್ರ ಗೌಡ ಇರುತ್ತಾರೆ. ಘಟನೆಯ ಬಳಿಕ 50 ಸಾವಿರ ರೂ. ನೀಡಿ ರಾಜಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು.
ಈ ಘಟನೆ ಹೊರಗಡೆ ಬರಬಾರದು ಎಂಬ ಕಾರಣಕ್ಕೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಮೈಸೂರು ಪೊಲೀಸರು ಈ ಎಲ್ಲ ಘಟನೆಗಳ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement