ದಲಿತ ವೇಟರ್ ಮೇಲೆ ನಟ ದರ್ಶನ್, ಸ್ನೇಹಿತರಿಂದ ಹಲ್ಲೆ: ಇಂದ್ರಜಿತ್ ಲಂಕೇಶ ಆರೋಪ, ಗೃಹ ಸಚಿವರಿಗೆ ದೂರು

ಬೆಂಗಳೂರು: 25 ಕೋಟಿ ರೂ. ವಂಚನೆ ಪ್ರಕರಣ ಮುಕ್ತಾಯವಾಗುತ್ತಿದ್ದಂತೆ ಈಗ ಮತ್ತೊಂದು ವಿಚಾರ ಬೆಳಕಿಗೆ ಬಂದಿದ್ದು, ನಟ ದರ್ಶನ್ ಮತ್ತು ಸ್ನೇಹಿತರು ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ ಮಾಡಿದ್ದಾರೆ.
ಬ್ಯಾಂಕಿನಿಂದ ಸಾಲ ಕೊಡಿಸುವ ವಿಚಾರದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಯತ್ನಿಸಿದ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲಿನಲ್ಲಿ ದಲಿತ ವೇಟರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೇಟರ್ ಕಣ್ಣುಗಳಿಗೆ ಹಾನಿಯಾಗಿದೆ. ಈ ಘಟನೆಯ ಸಂದರ್ಭದಲ್ಲಿ ದರ್ಶನ್, ರಾಕೇಶ್, ಹರ್ಷ ಮೇಲಾಂಟ, ಮತ್ತು ಪವಿತ್ರ ಗೌಡ ಇರುತ್ತಾರೆ. ಘಟನೆಯ ಬಳಿಕ 50 ಸಾವಿರ ರೂ. ನೀಡಿ ರಾಜಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಈ ಘಟನೆ ಹೊರಗಡೆ ಬರಬಾರದು ಎಂಬ ಕಾರಣಕ್ಕೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಮೈಸೂರು ಪೊಲೀಸರು ಬಳೆ ತೊಟ್ಟಿದ್ದಾರಾ? ಈ ಎಲ್ಲ ಘಟನೆಗಳ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.
ಈಗ ನಾನು ಬೊಮ್ಮಾಯಿ ಅವರಲ್ಲಿ ದೂರು ನೀಡಿದ್ದೇನೆ. ಪೊಲೀಸರು ತನಿಖೆ ನಡೆಸಲಿ. ಮುಂದೆ ನೋಡೋಣ ಎಂದು ಉತ್ತರಿಸಿದರು
ಇಂದು (ಗುರುವಾರ) ಬೆಳಿಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಇಂದ್ರಜೀತ್‌ ಲಂಕೇಶ ಅವರು, ನಟ ದರ್ಶನ್ ಮತ್ತು ಅವರ ಸ್ನೇಹಿತರ ವಿರುದ್ಧ ದೂರು ನೀಡಿದ್ದಾರೆ. ನಟನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೈಸೂರು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಕೋರಿದ್ದಾರೆ.
ಅರುಣಾ ಕುಮಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆಕೆಯನ್ನು ಮನೆಗೆ ಕರೆಸಿಕೊಂಡಿದ್ದು ಯಾಕೆ? 25 ಕೋಟಿ ವಂಚನೆಗೆ ಒಳಗಾದವರು ಇಷ್ಟು ಬೇಗ ರಾಜಿ ಹೇಗೆ ಆಗುತ್ತಾರೆ? ಏನೇನು ನಡೆದಿದೆ ಎನ್ನುವುದು ಎಲ್ಲರಿಗೆ ಗೊತ್ತಿದೆ ಎಂದು ಹೇಳಿದರು.
ದರ್ಶನ್ ಯಾಕೆ ಹೊಡೆದಿದ್ದಾರೆ ಎಂಬುದನ್ನು ಅವರನ್ನು ಕೇಳಿ. ತನಿಖೆಯೇ ಶುರುವಾಗಿಲ್ಲ. ಆಗಲೇ ರಾಜಿ ಮಾತುಕತೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಅರುಣಾ ಕುಮಾರಿಗೆ ಬೆದರಿಕೆ ಹಾಕಲಾಗಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement