ಶ್ರವಣಬೆಳಗೊಳದಲ್ಲಿ ಕೋನಾರ್ಕ್ ಮಾದರಿ ಪ್ರವಾಸಿ ಸರ್ಕಿಟ್ ನಿರ್ಮಾಣ: ಯೋಗೇಶ್ವರ

ಬೆಂಗಳೂರು: ಶ್ರವಣಬೆಳಗೊಳದಲ್ಲಿ ಜೈನ ಪ್ರವಾಸಿ ಸರ್ಕಿಟ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದಲ್ಲಿ ಕೋನಾರ್ಕ್ ಸೂರ್ಯ ದೇವಾಲಯದ ಇತಿಹಾಸ ಹೇಳುವ ಒಂದು ವಿನೂತನ ಪರಿಕಲ್ಪನೆ ಪ್ರವಾಸಿಗರಿಗೆ ಸಾಕಾರಗೊಳಿಸಿದ್ದಾರೆ. ಪ್ರವಾಸಿಗರು ಸೂರ್ಯ ದೇವಾಲಯವನ್ನು ದರ್ಶನ ಮಾಡುವುದಕ್ಕೆ ಮುಂಚೆ ಅಲ್ಲಿ ನಿರ್ಮಾಣ ಮಾಡಿರುವ ಥಿಯೇಟರ್ ನಲ್ಲಿ ಸೂರ್ಯ ದೇವಾಲಯದ ಇತಿಹಾಸವನ್ನು ಚಲನಚಿತ್ರದ ಮೂಲಕ ತೋರಿಸಲಾಗುತ್ತದೆ. ನಂತರ, ಸೂರ್ಯ ದೇವಾಲಯ ದರ್ಶನ ಮಾಡಲಾಗುತ್ತದೆ. ಅದೇ ರೀತಿ ಜೈನ ಕಾಶಿ ಶ್ರವಣಬೆಳಗೊಳದಲ್ಲಿ ಇದೇ ಮಾದರಿಯಲ್ಲಿ ಬಾಹುಬಲಿಯ ಇತಿಹಾಸವನ್ನು ಹೇಳುವ ಒಂದು ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿ ಅದನ್ನು ಥಿಯೇಟರಿನಲ್ಲಿ ಪ್ರದರ್ಶಿಸಲಾಗುವುದು. ನಂತರ ಪ್ರವಾಸಿಗರು ಗೋಮಟೇಶ್ವರ ವೀಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಈ ಮೂಲಕ ಪ್ರವಾಸಿಗರಿಗೆ ಬಾಹುಬಲಿಯ ಸಂಪೂರ್ಣ ಇತಿಹಾಸದ ಮಾಹಿತಿ ನೀಡಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ನಂದಿಬೆಟ್ಟ ರೋಪ್ ವೇ ನಿರ್ಮಾಣ: ಜುಲೈ 23ರಂದು ಸ್ಥಳ ಪರಿಶೀಲನೆ

ವಿಶ್ವವಿಖ್ಯಾತ ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ಇದೇ ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ಮಾಡಲಿದ್ದಾರೆ.
ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಯೋಗೇಶ್ವರ್ ಅವರು, ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಗಿರಿಧಾಮ ರೋಪ್ ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಬೇಕು. ಜುಲೈ 23ರಂದು ಸ್ಥಳ ಪರಿಶೀಲನೆ ಮಾಡಿ ಅತೀ ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಹೇಳಿದರು.

ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಅತ್ಯಾಧುನಿಕವಾದ ಕಲೆ, ಸಾಂಸ್ಕೃತಿ, ಜಾನಪದ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಾಥ್ ವೇ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೂರು ಹಂತಗಳಲ್ಲಿ ಈ ಬೃಹತ್ ಹಾಥ್ ವೇ ಯೋಜನೆ ಅಂದಾಜು 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳ್ಳಲಿದೆ. ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಕಾಮಗಾರಿಗೆ ಚಾಲನೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಪಡಿಸಲು ಬಂಡವಾಳ ಆರ್ಕಷಿಸುವ ಸಂಬಂಧ ದಿ ಇಂಡಿಯನ್‌ ಎಕ್ಸ್‌ ಪೋ -2023 ಬೃಹತ್ ಮೇಳವನ್ನು ಆಯೋಜಿಸಲು ತಯಾರಿ ನಡೆಸುವಂತೆ ಯೋಗೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ವಿಸ್ತರಣೆಗೆ ವಿಫುಲ ಅವಕಾಶಗಳಿವೆ. ಹೀಗಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡಿ ದೇಶ ವಿದೇಶಗಳ ಪ್ರವಾಸಿಗರು ಆಗಮಿಸುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಅಂತರ್ ರಾಷ್ಟ್ರೀಯ ಪ್ರವಾಸಿ ಮೇಳವನ್ನು ಏರ್ಪಡಿಸುವ ಮೂಲಕ ಬಂಡವಾಳವನ್ನು ಆಕರ್ಷಿಸಬೇಕು ಎಂದರು.
ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಇದೇ ವೇಳೆ ಒನ್‌ ಐರಿಸ್‌ (ONE IRIS) ಕಂಪನಿಯವರು ಪ್ರವಾಸೋದ್ಯಮ ಮೇಳದ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement