ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಮೀಸಲಾತಿ ಮತ್ತೆ ಹೈಕೋರ್ಟ್‌ ಅಂಗಳಕ್ಕೆ

posted in: ರಾಜ್ಯ | 0

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸರಕಾರ ನಿಗದಿ ಪಡಿಸಿದ್ ಮೀಸಲಾತಿ ಮತ್ತು ಮತದಾರರ ಹಂಚಿಕೆ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಹೈಕೋರ್ಟ ಧಾರವಾಡ ಪೀಠದ ಮೊರೆ ಹೋಗಿದ್ದು, ಎರಡೂವರೆ ವರ್ಷಗಳಿಂದಲೂ ಚುನಾವಣೆ ನಡೆಯದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆ ಇದೆ.

ಎರಡೂವರೆ ವರ್ಷಗಳಿಂದ ಮಹಾನಗರ ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳೇ ಇಲ್ಲ. ಎರಡು ದಿನದಲ್ಲಿ ಪಾಲಿಕೆ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ ಇತ್ತು. ಆದರೆ, ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠಕ್ಕೆ ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರು ದೂರು ನೀಡಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಕೋರ್ಟ್ ಸ್ವೀಕಾರಿಸಿದ್ದು, ಎರಡು ದಿನದಲ್ಲಿ ವಿಚಾರಣೆ ನಡೆಯುವ ನಿರೀಕ್ಷೆ ಇದೆ ಎನ್ನಲಾಗಿದೆ. ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಚುನಾವಣೆ ನಡೆಯುವ ದಿನಾಂಕ ಘೋಷಣೆಯಾಗಲಿದೆ. ಇದರಿಂದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಇನ್ನಷ್ಟು ದಿನ ವಿಳಂಬವಾಗುವ ಸಾಧ್ಯತೆ ಇದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ೬೭ ವಾರ್ಡ್‌ಗಳಿದ್ದವು. ಅದನ್ನೀಗ ೮೨ ವಾರ್ಡಗಳನ್ನಾಗಿ ಪುನರ್ ರಚನೆ ಮಾಡಲಾಗಿದೆ. ೮೨ರಲ್ಲಿ ೪೦ ವಾರ್ಡಗಳಿಗೆ ಮಹಿಳಾ ಮೀಸಲಾತಿ ಪ್ರಕಟಿಸಲಾಗಿದೆ. ನಾಲ್ಕು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ವಾರ್ಡ್‌ಗಳು ಬರುತ್ತವೆ ಪ್ರತಿ ವಿಧಾನಸಭಾ ವ್ಯಾಪ್ತಿಗೆ ಮಹಿಳಾ ಮೀಸಲಾತಿ ಪ್ರಕಟಿಸಬೇಕು ಎಂಬುದು ಒಂದು ಬೇಡಿಕೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

೮೨ ವಾರ್ಡಗಳಲ್ಲಿ ೮,೧೧,೬೩೨ ಮತದಾರರು ಇದ್ದಾರೆ. ಮತದಾರರರನ್ನು ಎಲ್ಲಾ ವಾರ್ಡಗಳಿಗೆ ಸರಿಯಾಗಿ ಹಂಚಿಕೆ ಮಾಡಬೇಕಿತ್ತು. ಆದರೆ ಕೆಲವು ವಾರ್ಡಗಳಲ್ಲಿ ೫-೬ ಸಾವಿರ ಮತದಾರರು, ಕೆಲವು ವಾರ್ಡಗಳಲ್ಲಿ ೧೩-೧೪ ಸಾವಿರ ಮತದಾರರು ಇದ್ದಾರೆ. ಇದು ಅವೈಜ್ಞಾನಿಕವಾಗಿದೆ ಎಂಬುದು ಕಾಂಗ್ರೆಸ್ ಮುಖಂಡರ ಎರಡನೇ ಆರೋಪವಾಗಿದೆ.

ಮಹಿಳಾ ಮೀಸಲಾತಿ ಮತ್ತು ಮತದಾರರ ಹಂಚಿಕೆ ವೈಜ್ಞಾನಿಕವಾಗಿ ಆಗುವವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವುದು ಬೇಡ ಎಂದು ಕಾಂಗ್ರೆಸ್ ಮನವಿ ಮಾಡಿದೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement