ಕರ್ನಾಟಕದಲ್ಲಿ ಶನಿವಾರ 1.18ಕ್ಕೆ ಇಳಿದ ಕೋವಿಡ್‌ ಸಕಾರಾತ್ಮಕ ದರ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 1806 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದೇ ಸಮಯದಲ್ಲಿ 42 ಮಂದಿ ಮೃತಪಟ್ಟಿದ್ದು, 2,748 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದ ಪಾಸಿಟಿವಿಟಿ ರೇಟ್ 1.18ಕ್ಕೆ ಇಳಿಕೆ ಕಂಡಿದೆ.
ಈವರೆಗೆ ರಾಜ್ಯದಲ್ಲಿ ಒಟ್ಟು 28,80,370 ಮಂದಿಗೆ ಕೊರೊನಾ ಬಂದಿದೆ. 28,12,869 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಒಟ್ಟು 31,399 ಸಕ್ರಿಯ ಪ್ರಕರಣಗಳಿವೆ. ಕೋವಿಡ್-19 ಮರಣ ಪ್ರಮಾಣ ಶೇ.2.32ರಷ್ಟಿದೆ.
ಬೆಂಗಳೂರಿನಲ್ಲಿ ಇಂದು 411 ಮಂದಿಗೆ ಕೊರೊನಾ ಸೋಂಕು ತಗುಲಿದೆ. 549 ಜನ ಡಿಸ್ಚಾರ್ಜ್ ಆಗಿದ್ದಾರೆ. 10 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

16-07-2021 HMB Kannada

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ