ಮಹದಾಯಿ ಹೋರಾಟಕ್ಕೆ ಏಳು ವರ್ಷ: ಕಪ್ಪುಪಟ್ಟಿ ಧರಿಸಿ ರೈತರ ಮೌನ ಪ್ರತಿಭಟನಾ ರ‍್ಯಾಲಿ

posted in: ರಾಜ್ಯ | 0

ಗದಗ: ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರು ನಡೆಸುತ್ತಿರುವ ಹೋರಾಟ ಜುಲೈ ೧೬ಕ್ಕೆ ಏಳನೇ ವರ್ಷಕ್ಕೆ ಕಾಲಿಟ್ಟಿದೆ.

೭ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಶುಕ್ರವಾರ ನರಗುಂದ ಪಟ್ಣಣದಲ್ಲಿ ರೈತರ ಮೌನ ಪ್ರತಿಭಟನಾ ರ‍್ಯಾಲಿ ನಡೆಸಿದರು. ಕೈಗೆ ಕಪ್ಪು ಪಟ್ಟಿ ಧರಿಸಿ ಹಾಗೂ ಕಪ್ಪುಬಾವುಟ ಪ್ರದರ್ಶಿಸಿದ ರೈತ ಮುಖಂಡರು ರೈತಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರಾಳ ದಿನವನ್ನಾವಾಗಿ ಆಚರಿಸಿದರು.

ನರಗುಂದ ಪಟ್ಟಣದ ಬಾಬಾಸಾಹೇಬ್ ಭಾವೆ ಅವರ ಪುತ್ಥಳಿಗೆ ರೈತ ಮುಖಂಡರು ಮಾಲಾರ್ಪಣೆ ಮಾಡಿದರು. ಇದೇ ವೇಳೆ ಕಳಸಾ ಬಂಡೂರಿ ಹೋರಾಟದಲ್ಲಿ ನಿಧನರಾದ ರೈತರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಿದರು.

ನರಗುಂದ ಪಟ್ಟಣದಲ್ಲಿ ಬಾಬಾಸಾಹೇಬ್ ಭಾವೆ ಅವರ ಪುತ್ಥಳಿಯ ಬಳಿಯಿಂದ ರೈತ ಪ್ರಮುಖರು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸುವ ಮೂಲಕ ಹೋರಾಟದ ವೇದಿಕೆ ತಲುಪಿ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ರೈತರು ಚರ್ಚಿಸಿದರು.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement