ಮೇಕೆದಾಟು: ವಿಧಾನಸೌಧದ ವರೆಗೆ ಪಾದಯಾತ್ರೆಗೆ ರೈತರ ನಿರ್ಧಾರ

posted in: ರಾಜ್ಯ | 0

ರಾಮನಗರ: ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡುವುದಾಗಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ರಾಮನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ಕನಕಪುರದ ಮೇಕೆದಾಟು ಪ್ರದೇಶದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಆಗಸ್ಟ್ ೩ ರಿಂದ ೭ ನೇ ತಾರೀಖಿನವರೆಗೆ ೫ ದಿನಗಳ ಕಾಲ ರೈತರಿಂದ ಪಾದಯಾತ್ರೆ ನಡೆಯಲಿದೆ ಎಂದು ರಾಮನಗರದ ಎಪಿಎಂಸಿ ಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

ಕನಕಪುರದ ಮೇಕೆದಾಟಿನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ನಡೆಯುವ ಪಾದಪಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗಿಯಾಗಲಿದ್ದಾರೆ ಎಂದು ಸಮಿತಿಯ ಉಪಾಧ್ಯಕ್ಷೆ ಕಲ್ಪನಾ ಶಿವಣ್ಣ ತಿಳಿಸಿದ್ದಾರೆ.

ರೇಷ್ಮೆನಗರಿಯ ಮಹತ್ವಾಕಾಂಕ್ಷೆ ಯೋಜನೆ ಮೇಕೆದಾಟುವಿಗೆ ಈ ಬಾರಿ ಜೀವ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಹಿಂದಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯೋಜನೆಯ ಸಂಪೂರ್ಣ ಡಿಪಿಆರ್ ಅನ್ನು ಕೇಂದ್ರಕ್ಕೆ ಕಳುಹಿಸಲಾಗಿತ್ತು. ನಂತರ ಮತ್ತೆ ತಮಿಳುನಾಡು ತಕರಾರು ಮಾಡಿದ ಪರಿಣಾಮ ಯೋಜನೆಗೆ ಬ್ರೇಕ್ ಬಿತ್ತು. ಆದರೆ ಈಗ ಹಸಿರು ಪೀಠದ ಜೊತೆಗೆ ಸುಪ್ರೀಂಕೋರ್ಟ್ ಸಹ ಯೋಜನೆ ಪರವಾಗಿ ತೀರ್ಪು ನೀಡಿದೆ. ರಾಮನಗರ ಜಿಲ್ಲಾಡಳಿತ ಸಹ ಯೋಜನೆ ಆದಷ್ಟು ಬೇಗ ಪ್ರಾರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

.ಮೇಕೆದಾಟು ಜಲಾಶಯದ ಸುತ್ತಮುತ್ತ ಬಹುಪಾಲು ಅರಣ್ಯ ಪ್ರದೇಶವಿದೆ. ಇದೇ ಕಾರಣಕ್ಕೆ ಕೇಂದ್ರ ಪರಿಸರ ಸಚಿವಾಲಯ ಹಾಗೂ ಸಂಬಂಧಿಸಿದ ಟ್ರಿಬ್ಯುನಲ್ ನ ಅನುಮತಿ ಸಿಗುವುದು ವಿಳಂಬವಾಗುತ್ತಿದೆ.  ಯೋಜನೆ ಅನುಷ್ಠಾನಗೊಂಡಿದ್ದೇ ಆದಲ್ಲಿ ಬೆಂಗಳೂರಿಗರಿಗೆ ಕುಡಿಯುವ ನೀರಿನ ಬವಣೆ ತಪ್ಪಲಿದೆ. ರಾಮನಗರವೂ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆಯಾಗಲಿದೆ. ಜೊತೆಗೆ ೪೦೦ ಮೆಗಾವಾಟ್ ನಷ್ಟು ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ಅಂದಾಜಿಸಲಾಗಿದೆ. ಅಣೆಕಟ್ಟು ನಿರ್ಮಾಣದಿಂದ ಸರಿಸುಮಾರು ೨೫೦೦ ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶ ಮುಳುಗಡೆಯಾಗಲಿದ್ದು, ಬದಲಿ ಜಾಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಈಗಾಗಲೇ ಬದಲಿ ಜಾಗವನ್ನು ಸಹ ಸರ್ವೆ ಮಾಡಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement