ಬೆಂಗಳೂರು:ಕರ್ನಾಟಕದ ದ್ವಿತೀಯ ಪಿಯು ಫಲಿತಾಂಶಗಳನ್ನು ಜುಲೈ 20 ರಂದು ಪ್ರಕಟಿಸಲಾಗುವುದು ಎಂದು ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆ (ಡಿಪಿಯುಇ) ಹೇಳಿದೆ
ಕೊರೊನಾದಿಂದ ಪರೀಕ್ಷೆ ರದ್ದಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20 ರಂದು ಪ್ರಕಟವಾಗಲಿದೆ.
ಈಗಾಗಲೇ ಫಲಿತಾಂಶ ಪ್ರಕಟ ಮಾಡಲು ಪಿಯುಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯುಸಿ ಬೋರ್ಡ್ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದಾರೆ ಎಂದು ಪಬ್ಲಿಲ್ ಟವಿ.ಇನ್ ವರದಿ ಮಾಡಿದೆ.
ಜುಲೈ 20 ರಂದು ಇಲಾಖೆಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಹೀಗಾಗಿ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿ ಹೇಳಿದೆ.
ವಿದ್ಯಾರ್ಥಿಗಳು ಫಲಿತಾಂಶ ನೋಡಲು ನೋಂದಣಿ ಸಂಖ್ಯೆ ಪಡೆದುಕೊಳ್ಳಬೇಕು. ಇಲಾಖೆ ವೆಬ್ ಸೈಟ್ ನಲ್ಲಿ “Know my registration number”ಲಿಂಕ್ ನೀಡಿ ಆ ಲಿಂಕ್ ಮೂಲಕ ಪ್ರತಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ. ಇಂದಿನಿಂದ ಈ ಲಿಂಕ್ ಓಪನ್ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಇಮೇಲ್ ಮತ್ತು ಮೊಬೈಲ್ ಗೆ ಪಿಯುಸಿ ಬೋರ್ಡ್ ಲಿಂಕ್ ಕಳಿಸಿ ಕೊಡಲಿದೆ ಎಂದು ವರದಿ ತಿಳಿಸಿದೆ.
ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ದ್ವಿಯೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು ಹಾಗೂ ಎಲ್ಲ ವಿದ್ಯಾರ್ಥಿಗಳನ್ನ ಸರ್ಕಾರ ಉತ್ತೀರ್ಣ ಎಂದು ಘೋಷಿಸಿತ್ತು.ಅಲ್ಲದೆ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲು ವಿದ್ಯಾರ್ಥಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಹಾಗೂ ಶೇ.10 ಇಂಟರ್ನಲ್ ಅಸೆಸ್ಮೆಂಟ್ ಅಂಕಗಳ ಆಧಾರದಲ್ಲಿ ಈ ವರ್ಷ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟ ಮಾಡಲಿದೆ ಎಂದು ಹೇಳಲಾಗಿದೆ. ಒಂದು ವೇಳೆ ಫಲಿತಾಂಶ ತೃಪ್ತಿಯಾಗದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಯಸಿದರೆ ಅವರಿಗೆ ಪರೀಕ್ಷೆ ಬರೆಯಲು ಬೋರ್ಡ್ ಅವಕಾಶ ಮಾಡಿಕೊಡಲಿದೆ
ನಿಮ್ಮ ಕಾಮೆಂಟ್ ಬರೆಯಿರಿ