ಸರ್ಕಾರಿ ಶಾಲೆ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡಿ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣ ಕ್ರಮವಾಗಿ, ಅನೇಕ ಶಿಕ್ಷಕರು ರಜಾ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಹೀಗೆ ರಜಾ ಅವಧಿಯಲ್ಲಿ ಕೋವಿಡ್ ಕಾರ್ಯಗಳಿಗೆ ನಿಯೋಜಿಸಿರುವ ಶಿಕ್ಷಕರುಗಳಿಗೆ ಬಿಎಲ್‌ಓಗಳ ಮಾದರಿಯಲ್ಲಿ ಗಳಿಕೆ ರಜೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್. ಶಿವಕುಮಾರ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು, ರಜಾ ಅವಧಿಯಲ್ಲಿ ಕೋವಿಡ್-೧೯ ಕಾರ್ಯಗಳಿಗೆ ನಿಯೋಜಿಸಿರುವ ಶಿಕ್ಷಕರುಗಳಿಗೆ ಕೆ.ಸಿ.ಎಸ್.ಆರ್. ನಿಯಮ ೧೧೩(೩)(ಎ)ರನ್ವಯ ಗಳಿಕೆ ರಜೆ ಮಂಜೂರು ಮಾಡಲು ಅವಕಾಶವಿರುತ್ತದೆ. ಈ ಹಿನ್ನೆಲೆಯಲ್ಲಿ ಕೋವಿಡ್-೧೯ ಕಾರ್ಯಗಳಿಗೆ ನಿಯೋಜಿಸಿರುವ ಶಿಕ್ಷಕರುಗಳಿಗೆ ಗಳಿಕೆ ರಜೆ ಮಂಜೂರು ಮಾಡಲು ಅಗತ್ಯ ಕ್ರಮವಹಿಸುವಂತೆ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ನಿರ್ದೇಶಿಸಿದೆ.

 

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement