ಒಕ್ಕಲಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಿದ ರಾಜ್ಯ ಸರ್ಕಾರ, ನಿಗಮಕ್ಕೆ 500 ಕೋಟಿ ರೂ.

ಬೆಂಗಳೂರು : ರಾಜ್ಯ ಸರ್ಕಾರವು, ಒಕ್ಕಲಿಗರ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ, ಆದೇಶಿಸಿದೆ.
ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ. ಅಕ್ಕಮಹಾದೇವಿ ನಡವಳಿಗಳನ್ನು ಹೊರಡಿಸಿದ್ದು, 2021-22ನೇ ಸಾಲಿನ ಆಯವ್ಯಯ ಕಂಡಿಕೆ-148ರಲ್ಲಿ ಒಕ್ಕಲಿಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಹಾಗೂ ನಿಗಮದ ಚಟುವಟಿಕೆಗಳಿಗೆ 500 ಕೋಟಿ ರು.ಗಳನ್ನು ವೆಚ್ಚ ಮಾಡಲು ಯೋಜಿಸಲಾಗಿದೆ ಎಂದು ಪ್ರಸ್ತಾಪಿಸಲಾಗಿದೆ..
ಈ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯಗಳಾದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3ಎನಲ್ಲಿ ಕ್ರ.ಸಂ-1ರ(a) ಯಿಂದ (t) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ನಾಮಧಾರ್ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ಸರ್ಪ ಒಕ್ಕಲಿಗ,  ಹಳ್ಳಿಕಾರ್ ಒಕ್ಕಲಿಗ, ಗಂಗಡ್​ಕಾರ್ ಒಕ್ಕಲಿಗ  ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ,  ಮರಸು ಒಕ್ಕಲಿಗ ಗೌಡ, (GOUDA) / ( GOWDA), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ರಡ್ಡಿ, ಗೌಂಡರ್, ನಾಮಧಾರಿ ಗೌಡ,  ಉಪ್ಪಿನ ಕೊಳಗ/ ಉತ್ತಮ ಕೊಳಗ ಜಾತಿಗಳಿಗೆ ಒಕ್ಕಲಿಗ ಅಭಿವೃದ್ಧಿ ನಿಗಮ ಶ್ರಮಿಸಲಿದೆ  ಎಂದು ಆದೇಶಿಸಲಾಗಿದೆ.
ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013ರಡಿಯಲ್ಲಿ ನೋಂದಾಯಿಸಿ ಸ್ಥಾಪಿಸುವುದು. ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಜಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement