ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 1,869 ಜನರಿಗೆ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶನಿವಾರ ಹೊಸದಾಗಿ 1,869 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 42 ಜನ ಮೃತಪಟ್ಟಿದ್ದಾರೆ ಹಾಗೂ 3144 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 28,16,013 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ತನ್ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,121 ಜನರ ಸಾವು ಸಂಭವಿಸಿದೆ. 30,082 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇದೇ ಸಮಯದಲ್ಲಿ ಬೆಂಗಳೂರಿನಲ್ಲಿ 432 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,21,803 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,93,848 ಜನರು ಗುಣಮುಖರಾಗಿದ್ದಾರೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 6 ಜನರು ಮೃತಪಟ್ಟಿದ್ದಾರೆ. ಅದರಂತೆ, ಕೊರೊನಾದಿಂದ ಈವರೆಗೆ 15,787 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ 12,167 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

17-07-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement