ನಾಗಮಂಗಲ: ಕೊನೆಗೂ ಬೋನಿಗೆ ಬಿದ್ದ ಚಿರತೆ, ಜನತೆ ನಿಟ್ಟುಸಿರು

ನಾಗಮಂಗಲ: ಕೆಲ ದಿನಗಳಿಂದ ಗ್ರಾಮಸ್ಥರಿಗೆ ಸಮಸ್ಯೆಯಾಗಿ ಕಾಡುತ್ತಿದ್ದ ಚಿರತೆಯೊಂದು ತಾಲೂಕಿನ ಬೆಳ್ಳೂರು ಹೋಬಳಿ ಮಂತನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿರುವ ಬೋನಿಗೆ ಬಿದ್ದಿದೆ.
ಒಂದೂವರೆ ವರ್ಷದ ಹೆಣ್ಣು ಚಿರತೆ ಇದಾಗಿದ್ದು, ಇದು ಮಂತನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಿಗೆ ತಲೆನೋವಿಗೆ ಕಾರಣವಾಗಿತ್ತು. ಕೆಲ ದಿನಗಳಿಂದ ರೈತರ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯಿಂದ ಹೈರಾಣಾದ ರೈತರು ತಾಲೂಕು ಅರಣ್ಯ ಇಲಾಖೆಗೆ ಈ ಬಗ್ಗೆ ದೂರು ನೀಡಿದ್ದರು.
ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಸಿಬ್ಬಂದಿ ಮಂತನಹಳ್ಳಿ ಗ್ರಾಮದ ಸಿದ್ದಯ್ಯ ಎಂಬುವವರ ತೋಟದಲ್ಲಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು. ಕೊನೆಗೂ ಚಿರತೆ ಬೋನಿಗೆ ಬಿದ್ದಿದ್ದು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯ ಶಿಂಷಾ ಬಳಿಯ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement