ಯಡಿಯೂರಪ್ಪ 6 ಬ್ಯಾಗ್​​ ತೆಗೆದುಕೊಂಡು ದೆಹಲಿಗೆ ಹೋಗಿದ್ದಾರೆ; ಅದರಲ್ಲಿ ಏನಿದೆ ಎಂದು ಅವರೇ ಹೇಳಲಿ; ಎಚ್​ಡಿಕೆ

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ದೆಹಲಿ ಪ್ರವಾಸ ಕೈಗೊಂಡಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಶನಿವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ದೆಹಲಿಗೆ ಹೋಗುವಾಗ ಹೈ ಕಮಾಂಡ್​​ಗೆ ಕೊಡಲು ಆರು ಬ್ಯಾಗ್ ಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಿದ್ದಾರೆ . ಉಡುಗೊರೆ ತೆಗೆದುಕೊಂಡು ಹೋಗಿದ್ದಾರಾ ಅಥವಾ ಬೇರೆ ಏನು ತೆಗೆದುಕೊಂಡು ಹೋಗಿದ್ದಾರೆ ಎಂಬುದನ್ನು ಅವರೇ ಹೇಳಬೇಕು ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಭೇಟಿ ಆಡಲು ಹೋದ ಮುಖ್ಯಮಂತ್ರಿಗಳು ಪ್ರಧಾನಿ ಭೇಟಿ ಮಾಡುವಾಗ ತಾವೊಬ್ಬರೇ ಹೋಗಿದ್ದಾರೆ ಅಥವಾ ಬ್ಯಾಗ್ ಗಳ ಸಮೇತನೇ ಭೇಟಿ ಮಾಡಿದ್ದಾರೆ ಎಂಬುದರ ಕುರಿತು ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಜ್ಯದಲ್ಲಿ ಕನ್ನಡಿಗರಿಂದ ಆಡಳಿತ ನಡೆಯಬೇಕೇ ಹೊರತು, ದೆಹಲಿ ಬಿಜೆಪಿ ಹೈಕಮಾಂಡ್​​ನಿಂದ ಅಲ್ಲ. ನಿನ್ನೆ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಸ್ಪೆಷಲ್ ಫ್ಲೈಟ್ ನಲ್ಲಿ ಹೋಗುವಾಗ ಆರು ಬ್ಯಾಗ್ ಗಳನ್ನು ತಗೊಂಡು ಹೋಗಿದ್ದಾರೆ. ಆ ಬ್ಯಾಗ್ ಗಳಲ್ಲಿ ಕರ್ನಾಟಕದ ವಿಷಯಗಳು ಬಗ್ಗೆ ತುಂಬಿದೆಯಾ..? ಅಥವಾ ಬೇರೆ ಏನಾದರೂ ತುಂಬಿಕೊಂಡು ಹೋಗಿದ್ದಾರಾ ಎಂಬುದನ್ನು ಹೇಳಬೇಕು ಎಂದರು.
ಪ್ರಧಾನಿಗಳನ್ನು ಭೇಟಿ ಮಾಡಿ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಎಷ್ಟರ ಪಟ್ಟಿಗೆ ಅವರನ್ನು ಗೌರವಿಸಿ, ಪ್ರಧಾನಿಯವರು ರಾಜ್ಯದ ಸಮಸ್ಯೆಗಳ ಬಗ್ಗೆ ಸ್ಪಂದಿಸುತ್ತಾರೆಂದು ನೋಡೋಣ‌ ಎಂದು ಹೇಳಿದರು.
ರಾಜ್ಯದಲ್ಲಿ ಎಲ್ಲ ಕಡೆ ಅಕ್ರಮ ಗಣಿಗಾರಿಕೆ:
ಅಕ್ರಮ ಗಣಿಗಾರಿಕೆ ವಿರುದ್ದ ರಾಜ್ಯಪಾಲರಿಗೆ ಸಂಸದೆ ಸುಮಲತಾ ದೂರು ನೀಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಾನು ಅವರ ಬಗ್ಗೆ ಚರ್ಚೆ ಮಾಡುವುದಿಲ್ಲ. ಆದರೆ ರಾಜ್ಯದಲ್ಲಿ ಎಲ್ಲಾ ಕಡೆಯೂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದನ್ನು ನಿಲ್ಲಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಸರ್ಕಾರದಲ್ಲಿರುವ ಯಾವುದೇ ನಾಯಕ ಈ ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡಲಿ. ಅದಕ್ಕೆ ನಾನು ಹಾಗೂ ನನ್ನ ಪಕ್ಷದಿಂದ ಬೆಂಬಲ ಕೊಡಲು ಸಿದ್ದನಿದ್ದೇನೆ ಎಂದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement