ಭಾರತದಲ್ಲಿ ಕೊರೊನಾದಿಂದ 560 ಮಂದಿ ಸಾವು

ನವದೆಹಲಿ: ‘ಭಾರತದಲ್ಲಿ ಶನಿವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 38,079 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,10,64,908ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಇದೇ ಸಮಯದಲ್ಲಿ 560 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದ ಒಟ್ಟು ಸಾವಿನ ಸಂಖ್ಯೆಯು 4,13,091ಕ್ಕೆ ಹೆಚ್ಚಿದೆ. ಇನ್ನೊಂದೆಡೆ ಸಕ್ರಿಯ ಪ್ರಕರಣಗಳ ಸಂಖ್ಯೆಯು 4,24,025ಕ್ಕೆ ಇಳಿದಿದೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇ 1.36ರಷ್ಟು ಪಾಲನ್ನು ಹೊಂದಿದೆ. ದೇಶದ ಕೋವಿಡ್‌ ಚೇತರಿಕೆ ಪ್ರಮಾಣವು ಶೇ 97.31 ರಷ್ಟಿದೆ’ ಎಂದು ಸಚಿವಾಲಯ ಹೇಳಿದೆ.
ದೇಶದಲ್ಲಿ ಈವರೆಗೆ 3,02,27,792 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಮರಣ ಪ್ರಮಾಣವು ಶೇ 1.33ರಷ್ಟಿದೆ.ಕೋವಿಡ್‌ ದೃಢ ಪ್ರಮಾಣವು ಶೇ 1.91ರಷ್ಟಿದೆ. ಸತತ 26ನೇ ದಿನ ಸೋಂಕು ದೃಢ ಪ್ರಮಾಣವು ಶೇ 3ಕ್ಕಿಂತ ಕಡಿಮೆ ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ದೇಶದಾದ್ಯಂತ ಇದುವರೆಗೆ ಒಟ್ಟು 39.96 ಕೋಟಿ ಲಸಿಕೆಯ ಡೋಸ್‌ಗಳನ್ನು ವಿತರಣೆ ಮಾಡಲಾಗಿದೆ. ಶುಕ್ರವಾರ 19,98,715 ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಈವರೆಗೆ ಒಟ್ಟು 44,20,21,954 ಪರೀಕ್ಷೆಗಳನ್ನು ನಡೆಸಲಾಗಿದೆ.

ಪ್ರಮುಖ ಸುದ್ದಿ :-   ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement