ಕರ್ನಾಟಕದಲ್ಲಿ ಮಳೆ ಮುಂದುವರಿಕೆ :ಜುಲೈ 21ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಜೋರು

ಬೆಂಗಳೂರು: ಕೇರಳದಿಂದ ಮಹಾರಾಷ್ಟ್ರದೆಡೆಗೆ ವೇಗವಾದ ಸುಳಿಗಾಳಿ ಬೀಸುತ್ತಿದ್ದು, ಇದರ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಭಾನುವಾರ ಧಾರಾಕಾರ ಮಳೆ ಸುರಿಯಲಿದೆ. ಜೊತೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಸಾಕಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದೆಲ್ಲೆಡೆ ಈಗಾಗಲೇ ಕಳೆದೊಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜುಲೈ 21 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರೆಯಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ದೀರ್ಘಕಾಲದವರೆಗೆ ಮುಂದುವರೆಯಲಿದೆ. ಕರಾವಳಿ ಪ್ರದೇಶಗಳಲ್ಲಿ ಈಗಾಗಲೇ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಸಮುದ್ರಕ್ಕೆ ಇಳಿಯದಂತೆ ತಿಳಿಸಲಾಗಿದೆ. ಮಳೆಯೊಂದಿಗೆ ವೇಗವಾದ ಗಾಳಿಯೂ ಇರುವುದರಿಂದ ಇದು ಅಪಾಯ ಎಂದು ಮಾಹಿತಿ ನೀಡಲಾಗಿದೆ.

ಕರ್ನಾಟಕದಲ್ಲಿ ಸ್ವಲ್ಪ ತಡವಾಗಿಯೇ ಆರಂಭವಾದ ಮುಂಗಾರು ಮಳೆ ರೈತರಿಗೆ ಶುಭ ತಂದಿದೆ. ಸದ್ಯ ರಾಜ್ಯದೆಲ್ಲೆಡೆ ಕೃಷಿ ಚಟುವಟಿಕೆ ಚುರುಕಾಗಿದೆ. ಮಳೆ ಬಿಡದಂತೆ ನಿರಂತರವಾಗಿ ಸುರಿಯುತ್ತಿದ್ದರೆ ಮುಂಗಾರು ಬೆಳೆಗಳಿಗೆ ಕೊಳೆ ರೋಗಗಳು ಬರುವ ಆತಂಕವೂ ಇದೆ.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಭಾನುವಾರವೂ ಸಹ ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಜುಲೈ ೨೧ರವರೆಗೆ ಮಳೆಯ ಏರಿಳಿತ ಮುಂದುವರೆಯುತ್ತಲೇ ಇರಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ನೆರೆಯ ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಮುಂಬೈನ ರಸ್ತೆಗಳು ಆಗಲೇ ಮುಳುಗಡೆಯ ಅಂಚಿಗೆ ತಲುಪಿವೆ. ಗೋವಾದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು, ಕೇರಳದಲ್ಲೂ ವರುಣ ತನ್ನ ರೌದ್ರಾವತಾರ ಮುಂದುವರೆಸಿದ್ದಾನೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement