ನಟಿ ಶ್ರುತಿಗೆ ಶಾಕ್​ ನೀಡಿದ ಸಿಎಂ; ಪ್ರವಾಸೋದ್ಯಮ ನಿಗಮ ಅಧ್ಯಕ್ಷ ಸ್ಥಾನಕ್ಕೆ ಆಪ್ತನಿಗೆ ಬಿಎಸ್‌ ವೈ ಮಣೆ ಣೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾಪು ಸಿದ್ಧಲಿಂಗಸ್ವಾಮಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸದ್ಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರುತಿ ಅವರ ನೇಮಕಾತಿಯನ್ನು ಹಿಂಪಡೆದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನವರಾದ ಸಿದ್ಧಲಿಂಗಸ್ವಾಮಿ ಅವರನ್ನು ನೇಮಿಸಲಾಗಿದೆ.
ಕಾಪು ಸಿದ್ದಲಿಂಗಸ್ವಾಮಿ ಬಹಳ ವರ್ಷ ಯಡಿಯೂರಪ್ಪ ಅವರಿಗೆ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು. ಯಡಿಯೂರಪ್ಪ ಅವರು ಕೆ.ಜೆ.ಪಿ ಮಾಡಿದಾಗ ವರುಣಾಕ್ಷೇತ್ರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದ್ದರು. ಪಕ್ಷಕ್ಕಾಗಿ ಕೆಲಸ ಮಾಡಿದ ಶ್ರುತಿ ಅವರನ್ನು ತೆಗೆದು, ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಿದ್ದು, ಪಕ್ಷದ ವಲಯದಲ್ಲಿ ಸಾಕಷ್ಟು ಟೀಕೆಗೆ ಕಾರಣವಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ