ನಾಳೆಯಿಂದ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ‘ಬಯೋಮೆಟ್ರಿಕ್’ ಹಾಜರಾತಿ ಕಡ್ಡಾಯ

ಬೆಂಗಳೂರು: ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ನೀಲಾಗಿದ್ದ ಬಯೋಮೆಟ್ರಿಕ್ ಹಾಜರಾತಿ ನಾಳೆಯಿಂದ ಕಡ್ಡಾಯವಾಗಲಿದೆ. ನಾಳೆಯಿಂದ (ಜುಲೈ 19) ರಾಜ್ಯ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಕಾರ್ಯದರ್ಶಿ ಈ ಕುರಿತು ಮುನೀಶ್ ಮೌದ್ಗಿಲ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು 19-07-2021ರಿಂದ ಪುನರಾರಂಭಿಸಲಾಗುತ್ತದೆ ಎಂದುಗಿ ತಿಳಿಸಿದ್ದಾರೆ.
ಹೀಗಾಗಿ ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಇಲಾಖಾ ಕಚೇರಿಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಯಂತ್ರದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿ ತಮ್ಮ ಹಾಜರಾತಿಯನ್ನು ದಾಖಲಿಸುವುದು. ಆರೋಗ್ಯದ ಹಿತದೃಷ್ಠಿಯಿಂದ ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸುವಂತೆ ಸೂಚಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement