ಭಟ್ಕಳ: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿಗಳು, 10ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಯ ರಭಸಕ್ಕೆ ಸಿಲುಕಿದ್ದ 10ಕ್ಕೂ ಹೆಚ್ಚು ಮೀನುಗಾರರನ್ನು ಭಟ್ಕಳ ಬಂದರು ಸಮೀಪದ ಅಳಿವೆ ಪ್ರದೇಶದಲ್ಲಿ ರಕ್ಷಿಸಲಾಗಿದೆ.
ಅಬ್ಬರದ ಮಳೆಯಿಂದಾಗಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಲು ನಿರ್ಬಂಧವಿದ್ದರೂ, ಮೀನುಗಾರರು ಪಾತಿದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದರು ಎನ್ನಲಾಗಿದೆ. ಅರಬ್ಬೀ ಸಮುದ್ರದಲ್ಲಿ ಬಾರೀ ಗಾಳಿ ಸಹಿತ ಅಬ್ಬರದ ಮಳೆಯಾಗಿದ್ದರಿಂದ ಮೀನುಗಾರರು ಅಲೆಯ ರಭಸಕ್ಕೆ ವಾಪಸ್ ಬರಲಾಗದೆ ತೊಂದರೆ ಗೊಳಗಾಗಿದ್ದರು. ಇನ್ನು ಹಲವು ಪಾತಿ ದೋಣಿಗಳು ಅಲೆಯ ಹೊಡೆತಕ್ಕೆ ಪಲ್ಟಿಯಾಗಿವೆ. ತಕ್ಷಣ ದಡದಲ್ಲಿದ್ದ ಸ್ಥಳೀಯ ಮೀನುಗಾರರು ಇದನ್ನು ಗಮನಿಸಿ ಗಿಲ್ನೆಟ್ ದೋಣಿ ಮೂಲಕ ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.
ಮೀನುಗಾರರು ಭಟ್ಕಳದ ಮುಂಡಳ್ಳಿ, ಬೆಳ್ನಿ ಭಾಗದವರಾಗಿದ್ದಾರೆ ಎಂದು ಹೇಳಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ನಿಮ್ಮ ಕಾಮೆಂಟ್ ಬರೆಯಿರಿ

advertisement