ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ

ಬೆಂಗಳೂರು :ರಾಜ್ಯದಾದ್ಯಂತ ನಾಳೆಯಿಂದ (ಸೋಮವಾರದಿಂದ) ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ಈ ಬಾರಿ 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸಿದ್ಧತೆಗಳು ಪೂರ್ಣಗೊಂಡಿದೆ. ಕೊರೊನಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ.
ನಾಳೆ (19) ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ 1.30ರ ವರೆಗೆ ಸಮಯಾವಕಾಶ ನೀಡಲಾಗುತ್ತಿದೆ. ಭಾಷಾ ವಿಷಯಕ್ಕೆ ಸಂಬಂಧಿಸಿದಂತೆ ಜುಲೈ 22ರಂದು ಪರೀಕ್ಷೆ ನಡೆಯಲಿದೆ.
ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿಗಳು 4,72,643 ಬಾಲಕರು ಮತ್ತು 40,39,38 ಬಾಲಕಿಯರು ಸೇರಿದಂತೆ ಒಟ್ಟು 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. 977ಪುನರಾವರ್ತಿತ ವಿದ್ಯಾರ್ಥಿಗಳು, ಖಾಸಗಿಯಾಗಿ 21,817 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪರೀಕ್ಷೆಗಾಗಿ 14,927 ಶಾಲೆಗಳ 73,066 ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಬಾರಿ ಹೆಚ್ಚುವರಿಯಾಗಿ ಸಿಬ್ಬಂದಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 4,884 ಮುಖ್ಯ ಅಧೀಕ್ಷಕರು, 4,884 ಅಭಿರಕ್ಷಕರು, 80,389, ಕೊಠಡಿ ಮೇಲ್ವಿಚಾರಕರು, ಹಾಗೂ 4,884 ಸ್ಥಾನಿಕ ದಳದ ಸಿಬ್ಬಂದಿ ಪರೀಕ್ಷಾ ಕರ್ತವ್ಯ ನಿರ್ವಹಿಸಲಿದ್ದಾರೆ.
ವಿದ್ಯಾರ್ಥಿಗಳು ಬೆಳಗ್ಗೆ 8.30ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಸೂಚಿಸಲಾಗಿದ್ದು, ಆರೋಗ್ಯ ತಪಾಸಣೆ ಮುಗಿದ ನಂತರದಲ್ಲಿ ಅವರು ತಮ್ಮ ಕೊಠಡಿಗಳಿಗೆ ಪ್ರವೇಶ ನೀಡಲಾಗುತ್ತದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್‌ ಧರಿಸಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸ್‌ ಮಾಡಲಾಗುತ್ತದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ಸು ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ ಬಳಿ ಬಸ್ಸುಗಳು ನಿಲುಗಡೆಗೆ ಅವಕಾಶ ಕಲ್ಪಿಸಲು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಪ್ರಮುಖ ಸುದ್ದಿ :-   ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement