ಕರ್ನಾಟಕದಲ್ಲಿ ಕೊರೊನಾ ಹೊಸ ಸೋಂಕು, ಸಾವು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಭಾನುವಾರ) 1708 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 36 ಮಂದಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಹೋಲಿಸಿದರೆ ಕೊರೊನಾ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ.
ರಾಜ್ಯದಲ್ಲಿ ಒಂದೇ ದಿನ 2463 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 28,18,476ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 18,83,947ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 36,157ಕ್ಕೆ ಜಿಗಿತ ಕಂಡಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 29,291ಕ್ಕೆ ಇಳಿದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 386 ಸೋಂಕು ಪ್ರಕರಣಗಳು ದೃಢಪಟ್ಟರೆ, 9 ಮಂದಿ ಅಸುನೀಗಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

18-07-2021 HMB Kannada

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನಿಮ್ಮ ಕಾಮೆಂಟ್ ಬರೆಯಿರಿ

advertisement